ADVERTISEMENT

35 ಜನರ ನೇತ್ರ ಶಸ್ತ್ರಚಿಕಿತ್ಸೆಗೆ ಶಿಫಾರಸು

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 15:56 IST
Last Updated 20 ಜನವರಿ 2025, 15:56 IST
ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ನಾಗರಿಕರ ನೇತ್ರ ತಪಾಸಣೆ ಶಿಬಿರದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ. ರವೀಂದ್ರ ಕನಕೇರಿ ಮಾತನಾಡಿದರು
ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ನಾಗರಿಕರ ನೇತ್ರ ತಪಾಸಣೆ ಶಿಬಿರದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ. ರವೀಂದ್ರ ಕನಕೇರಿ ಮಾತನಾಡಿದರು   

ಕಂಪ್ಲಿ: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ಸೋಮವಾರ ಜರುಗಿತು.

ತಾಲ್ಲೂಕಿನ 85ಕ್ಕೂ ಅಧಿಕ ಹಿರಿಯ ನಾಗರಿಕರು ನೇತ್ರ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದು, ಇವರಲ್ಲಿ 35ಕ್ಕೂ ನಾಗರಿಕರ ನೇತ್ರ ಶಸ್ತ್ರಚಿಕಿತ್ಸೆಗೆ ತಜ್ಞ ವೈದ್ಯರ ತಂಡ ಶಿಫಾರಸು ಮಾಡಿತು.

ಕೇಂದ್ರದ ಆಡಳಿತಾಧಿಕಾರಿ ಡಾ.ರವೀಂದ್ರ ಕನಕೇರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ ಗಂಭೀರ ಸ್ವರೂಪದ ಕಾಯಿಲೆಯಾಗಿ ಪರಿಣಮಿಸುತ್ತಿದೆ. ಆರಂಭದಲ್ಲಿಯೇ ತಪಾಸಣೆ ಮಾಡಿಸಿ ಸಮಸ್ಯೆ ಕಂಡುಬಂದರೆ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.

ADVERTISEMENT

ಜಿಲ್ಲಾ ಕಣ್ಣಿನ ವೈದ್ಯ ಡಾ.ಆಂಜಿನೇಯ ಪ್ರಸಾದ್, ದಂತ ವೈದ್ಯ ಡಾ.ಶ್ರೀನಿವಾಸರಾವ್, ಮಕ್ಕಳ ವೈದ್ಯ ಡಾ.ನಂದೀಶ್, ಡಾ.ಹಾರಿಕಾ, ನೇತ್ರ ಪರೀಕ್ಷಕ ಪ್ರಕಾಶಗೌಡ, ಬಳ್ಳಾರಿಯ ಸ್ಮೈಲ್ ಸಂಸ್ಥೆಯ ಕಾರ್ಯದರ್ಶಿ ಉಮಾಪತಿಗೌಡ, ತಾಲ್ಲೂಕು ಎಂ.ಆರ್.ಡಬ್ಲ್ಯೂ ಸಿ.ರಾಣಿ, ಯು.ಆರ್.ಡಬ್ಲ್ಯೂ ಗೌಳೇರು ರಮೇಶ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.