ADVERTISEMENT

ಕೂಡ್ಲಿಗಿ: ವಿಷ್ಣುವರ್ಧನ್ ಸಮಾಧಿ ಪುನರ್ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 5:26 IST
Last Updated 15 ಆಗಸ್ಟ್ 2025, 5:26 IST
ಅಭಿಮಾನ್ ಸ್ಟುಡಿಯೊದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿ ತೆರವು ಮಾಡಿದ್ದನ್ನು ವಿರೋಧಿಸಿ ಕೂಡ್ಲಿಗಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಅಭಿಮಾನಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು
ಅಭಿಮಾನ್ ಸ್ಟುಡಿಯೊದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿ ತೆರವು ಮಾಡಿದ್ದನ್ನು ವಿರೋಧಿಸಿ ಕೂಡ್ಲಿಗಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಅಭಿಮಾನಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು   

ಕೂಡ್ಲಿಗಿ: ಅಭಿಮಾನ್ ಸ್ಟುಡಿಯೊದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವು ಮಾಡಿದ್ದನ್ನು ವಿರೋಧಿಸಿ ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ವಿಷ್ಣುವರ್ಧನ್ ಅಭಿಮಾನಿಗಳು, ಸ್ಮಾರಕವನ್ನು ಪುನರ್ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದಿಂದ ಮೆರವಣಿಗೆ ಹೊರಟ ಅಭಿಮಾನಿಗಳು, ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿಷ್ಣುವರ್ಧನ್ ಪರ ಘೋಷಣೆಗಳನ್ನು ಕುಗುತ್ತ ತಹಶೀಲ್ದಾರ್ ಕಚೇರಿ ಆವರಣಕ್ಕೆ ಬಂದು ಕೆಲ ಕಾಲ ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರಿಗೆ ಮನವಿ ಸಲ್ಲಿಸಿದರು.

ವಿಷ್ಣು ಸೇನಾ ಸಮಿತಿ ತಾಲ್ಲೂಕು ಅಧ್ಯಕ್ಷ ಎಂ. ಕರೇಗೌಡ, ಸದಸ್ಯರಾದ ನೀರ್ಕಲ್ ಅಜೇಯ್, ಸುಧಾಕರ, ಜಿ. ನಾಗರಾಜ, ರವಿ ನಿಂಬಳಗೆರೆ, ಮಲಿಯಪ್ಪ, ಮಹಾಂತೇಶ, ಮಲ್ಲೇಶ, ಲೋಕೇಶ್, ಸಾದಿಕ್, ರಹಿಮಾನ್, ನಾಗೇಶ್, ರಾಜ್, ತಿಪ್ಪೇಶ, ಮಧುಕುಮಾರಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.