ಸಾವು
ಪ್ರಾತಿನಿಧಿಕ ಚಿತ್ರ
ಹೂವಿನಹಡಗಲಿ: ತಾಲ್ಲೂಕಿನ ಕಗ್ಗಲಕಟ್ಟಿ ತಾಂಡಾದ ಜಮೀನೊಂದರಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಮೃತಪಟ್ಟಿರುವ ಘಟನೆ ಶುಕ್ರವಾರ ಜರುಗಿದೆ.
ಚನ್ನಾ ನಾಯ್ಕ (35) ಮೃತ ರೈತ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ತಮ್ಮ ಹೊಲದಲ್ಲಿ ನೀರು ಹಾಯಿಸಲು ತೆರಳಿದ್ದ ಅವರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾರೆ. ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಿರೇಹಡಗಲಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.