ಕೂಡ್ಲಿಗಿ: ತಾಲ್ಲೂಕಿನ ಹಿರೇಕುಂಬಳಗುಂಟೆ ಕಂದಾಯ ಗ್ರಾಮ ವ್ಯಾಪ್ತಿಯಲ್ಲಿ ರೈತರ ಪಟ್ಟ ಜಮೀನುಗಳಲ್ಲಿ ಯಾವುದೇ ಅನುಮತಿ ಪಡೆಯದೆ ಕ್ಲೀನ್ ಮ್ಯಾಕ್ಸ್ ಎಂಬ ವಿಂಡ್ ಪ್ಯಾನ್ ಕಂಪನಿ ಅಕ್ರಮವಾಗಿ ವಿದ್ಯುತ್ ಅಳವಡಿಸುತ್ತಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಸಿರು ಸೇನೆ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಬಾಣದ ಕೃಷ್ಣ ಮಾತನಾಡಿ, ಹಿರೇಕುಂಬಳಗುಂಟೆ ಹಾಗೂ ಹುಲಿಕೆರೆ ಗ್ರಾಮದ ವ್ಯಾಪ್ತಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯ್ತಿಯಿಂದ ಯಾವುದೇ ಪರವಾನಿಗೆ ಪಡೆಯದೆ ರೈತರ ಜಮೀನುಗಳಲ್ಲಿ ಕ್ಲೀನ್ ಮ್ಯಾಕ್ಸ್ ವಿಂಡ್ ಕಂಪನಿ ವಿದ್ಯುತ್ ಮೇನ್ ಲೈನ್ ಅಳವಡಿಸಿದೆ. ಅಲ್ಲದೆ ಸರ್ಕಾರದ ಯಾವುದೇ ನಿಯಮಗಳನ್ನು ಪಾಲಿಸಿಲ್ಲ. ಹುಲಿಕೆರೆ ಗ್ರಾಮಕ್ಕೆ ಸೇರಿದ ಐದಾರು ರೈತರು ತಮ್ಮ ಜಮೀನುಗಳಲ್ಲಿ ಅಡಿಕೆ, ತೆಂಗು, ನಿಂಬೆ ಬೆಳೆಗಳನ್ನು ಬೆಳೆದಿದ್ದು, ಅಲ್ಲಿಯೇ ಮನೆ ನಿರ್ಮಿಸಿಲೊಂಡು ವಾಸ ಮಾಡುತ್ತಿದ್ದಾರೆ. ಮನೆಗಳ ಮೇಲೆಯೇ ವಿಂಡ್ ಪ್ಯಾನ್ ವಿದ್ಯುತ್ ತಂತಿ ಹಾದು ಹೋಗಿದ್ದು ರೈತರು ಆತಂಕಪಡುವಂತಾಗಿದೆ. ಅದ್ದರಿಂದ ತಕ್ಷಣ ರೈತರ ಜಮೀನುಗಳಿಗೆ ಭೇಟಿ ನೀಡಿ ಅವುಗಳನ್ನು ತೆರವು ಮಾಡುವಂತೆ ಸೂಚನೆ ನೀಡುವ ಮೂಲಕ ರೈತರಿಗೆ ನ್ಯಾಯಾ ಒದಗಿಸಬೇಕು ಎಂದು ಒತ್ತಾಯಿಸಿದರು.
ತಹಶೀಲ್ದಾರ್ ವಿ.ಕೆ. ನೇತ್ರಾವತಿ ಮನವಿ ಸ್ವೀಕರಿಸಿದರು. ರಾಜ್ಯರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಮಮನಿ ಮಹೇಶ್, ಜಿಲ್ಲಾಧ್ಯಕ್ಷ ಬಣಕಾರ ಬಸವರಾಜ, ಹೊಸಪೇಟೆ ತಾಲ್ಲೂಕು ಅಧ್ಯಕ್ಷ ಬಿ. ಶೇಖಪ್ಪ, ಕೂಡ್ಲಿಗಿ ತಾಲ್ಲೂಕು ಅಧ್ಯಕ್ಷ ಬಾಣದ ಮಾರುತಿ, ಉಪಾಧ್ಯಕ್ಶ ಫಯಾಜ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.