ADVERTISEMENT

ಗಮನಸೆಳೆದ ರೂಪಕ, ಫ್ಯಾಶನ್ ಶೋ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 13:30 IST
Last Updated 1 ಜುಲೈ 2022, 13:30 IST
ಹೊಸಪೇಟೆಯ ಪಿ.ಡಿ.ಐ.ಟಿ. ಕಾಲೇಜಿನಲ್ಲಿ ಗುರುವಾರ ರಾತ್ರಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಾಜ–ರಾಣಿಯರ ಪೋಷಾಕು ಧರಿಸಿ ರ್‍ಯಾಂಪ್‌ ಮೇಲೆ ಹೆಜ್ಜೆ ಹಾಕಿದರು
ಹೊಸಪೇಟೆಯ ಪಿ.ಡಿ.ಐ.ಟಿ. ಕಾಲೇಜಿನಲ್ಲಿ ಗುರುವಾರ ರಾತ್ರಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಾಜ–ರಾಣಿಯರ ಪೋಷಾಕು ಧರಿಸಿ ರ್‍ಯಾಂಪ್‌ ಮೇಲೆ ಹೆಜ್ಜೆ ಹಾಕಿದರು   

ಹೊಸಪೇಟೆ (ವಿಜಯನಗರ): ನಗರದ ಪ್ರೌಢದೇವರಾಯ ತಾಂತ್ರಿಕ ಕಾಲೇಜಿನಲ್ಲಿ ಏರ್ಪಡಿಸಿದ್ದ ಎರಡು ದಿನಗಳ 'ಸಿಂಚನ' ವಾರ್ಷಿಕೋತ್ಸವಕ್ಕೆ ಗುರುವಾರ ರಾತ್ರಿ ತೆರೆ ಬಿತ್ತು.

ಸಮಾರೋಪದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ 'ವಿಜಯನಗರ ವೈಭವ' ರೂಪಕ ಮತ್ತು ಫ್ಯಾಶನ್ ಶೋ ಗಮನ ಸೆಳೆಯಿತು. ವಿವಿಧ ವರ್ಣ ಹಾಗೂ ವಿನ್ಯಾಸದ ವಸ್ತ್ರಗಳನ್ನು ತೊಟ್ಟು ಯುವಕ/ಯುವತಿಯರು ರ್‍ಯಾಂಪ್‌ ಮೇಲೆ ಹೆಜ್ಜೆ ಹಾಕಿದರು. ವಿದ್ಯಾರ್ಥಿಗಳು ಶಿಳ್ಳೆ ಹೊಡೆದು ಸಂಭ್ರಮಿಸಿದರು.

ಇದಕ್ಕೂ ಮುನ್ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಹೊಸಪೇಟೆ ಸ್ಟೀಲ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರತ್ನಪ್ರಸಾದ್ ಅಟ್ಲೂರಿ, ಸದ್ಯ ಕೈಗಾರಿಕಾ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿವೆ. ಅದಕ್ಕೆ ತಕ್ಕಂತಹ ಕೌಶಲ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಎಂಎಸ್‌ಪಿಎಲ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಎಚ್.ಕೆ.ರಮೇಶ್, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್.ಎಂ.ಗುರುಸಿದ್ದಸ್ವಾಮಿ, ಉಪಾಧ್ಯಕ್ಷ ಅಲ್ಲಂ ಚನ್ನಪ್ಪ, ಕಾರ್ಯಕಾರಿ ಮಂಡಳಿಯ ಸದಸ್ಯರಾದ ಕೋರಿ ವಿರೂಪಾಕ್ಷಪ್ಪ, ಕರಿಬಸವರಾಜ ಬಾದಾಮಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪಲ್ಲೇದ ದೊಡ್ಡಪ್ಪ, ಸದಸ್ಯರಾದ ಜ್ಯೋತಿ ಮಹಾಬಲೇಶ್ವರ, ಪ್ರಾಂಶುಪಾಲ ಎಸ್.ಎಂ.ಶಶಿಧರ್, ಉಪ ಪ್ರಾಂಶುಪಾಲ ಯು.ಎಂ. ರೋಹಿತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.