
ಮರಿಯಮ್ಮನಹಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿದ ಘಟನೆ ಸಮೀಪದ ಹಾರುವನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸೋಮವಾರ ರಾತ್ರಿ ನಡೆದಿದೆ.
ಚಿರತೆ ಆಹಾರ ಅರಸಿ ಒಂದು ಬದಿಯಿಂದ ಇನ್ನೊಂದು ಬದಿಗೆ ಹೆದ್ದಾರಿ ದಾಟುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಹೋದ ಪರಿಣಾಮ ಅದು ಸ್ಥಳದಲ್ಲೇ ಸಾವನ್ನಪ್ಪಿದೆ ಎನ್ನಲಾಗಿದೆ. ಹೆಣ್ಣು ಚಿರತೆಯಾಗಿದ್ದು, ಅಂದಾಜು ಐದು ವರ್ಷ ಪ್ರಾಯ ಇರಬಹುದು ಎಂದು ಸ್ಥಳಕ್ಕೆ ಭೇಟಿ ನೀಡಿದ ಆರ್‍ಎಫ್‍ಒ ಕೌಶಿಕ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಕಳೆದ 5ವರ್ಷದಲ್ಲಿ ಇದೇ ಹೆದ್ದಾರಿಯಲ್ಲಿ ರಾತ್ರಿ ಸಮಯದಲ್ಲಿ ರಸ್ತೆ ಅಪಘಾತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಒಟ್ಟು ಎರಡು ಚಿರತೆ ಹಾಗೂ ಒಂದು ಕರಡಿ ಮೃತಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.