ಬಳ್ಳಾರಿ: ಇಲ್ಲಿನ ವಿದ್ಯಾನಗರದ ನಿವಾಸಿ, ರಸಗೊಬ್ಬರ ವ್ಯಾಪಾರಿಯೊಬ್ಬರು ನಗರದ ಲಾಡ್ಜ್‌ವೊಂದರಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುರುಗೋಡು ತಾಲೂಕಿನ ಎರ್ರಂಗಳಿಯ ಪುಟ್ಟ ತಿಮ್ಮರೆಡ್ಡಿ (56) ಮೃತರು.
‘ಅವರು ವ್ಯಾಪಾರ ವಹಿವಾಟಿಗೆ ಕೋಟ್ಯಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಜತೆಗೆ, ರೈತರಿಂದ ಮೆಣಸಿನಕಾಯಿ ಖರೀದಿಸಿ ಕೋಲ್ಡ್ ಸ್ಟೋರೇಜ್‌ನಲ್ಲಿ ಇಟ್ಟಿದ್ದರು. ಆದರೆ ಮೆಣಸಿನಕಾಯಿಗೆ ಸೂಕ್ತ ಬೆಲೆ ಸಿಗದ ಕಾರಣ ನಷ್ಟವುಂಟಾಗಿತ್ತು. ಇದೆಲ್ಲದರಿಂದ ಮನನೊಂದ ಅವರು ನೇಣಿಗೆ ಶರಣಾಗಿದ್ದಾರೆ’ ಎಂದು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.