ADVERTISEMENT

ಬಳ್ಳಾರಿ: ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 14:12 IST
Last Updated 7 ಮಾರ್ಚ್ 2024, 14:12 IST
<div class="paragraphs"><p>ಅರುಣಾ ಲಕ್ಷ್ಮಿ</p></div>

ಅರುಣಾ ಲಕ್ಷ್ಮಿ

   

ಬಳ್ಳಾರಿ: ವಿಧಾನಸಭಾ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಗಾಂಧಿ ನಗರ ಠಾಣೆಯಲ್ಲಿ ಗುರುವಾರ ಎಫ್‌ಐಆರ್‌ ದಾಖಲಾಗಿದೆ.

ಬಾವಿ ಶ್ರೀನಿವಾಸ್‌ ರಂಗ ರೆಡ್ಡಿ ಎಂಬುವವರು 2024ರ ಜ.8ರಂದು ಗಾಂಧಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಸಂಜ್ಞೆಯ (ಎನ್‌ಎ– ನಾನ್‌ ಕಾಗ್ನಿಸೆಬಲ್‌) ಪ್ರಕರಣ (ಸಂಖ್ಯೆ 02/2024) ದಾಖಲಿದ್ದ ಪೊಲೀಸರು, ತನಿಖೆಗೆ ಅನುಮತಿ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವನ್ನು ಕೋರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಕೂಡಲೇ ತನಿಖೆ ಆರಂಭಿಸುವಂತೆ ಇತ್ತೀಚೆಗೆ ಆದೇಶಿಸಿತ್ತು.

ADVERTISEMENT

ನ್ಯಾಯಾಲಯದ ಆದೇಶದ ಮೇರೆಗೆ ಮಾ.7ರಂದು ಪ್ರಜಾ ಪ್ರತಿನಿಧಿ ಕಾಯ್ದೆ– 1951, 1988ರ ಸೆಕ್ಷನ್‌ 125 (ಎ) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಅರುಣಾ ಲಕ್ಷ್ಮಿ ಅವರು ಬಳ್ಳಾರಿ ನಗರ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅಫಿಡವಿಟ್‌ನಲ್ಲಿ ಅವರು ತಮ್ಮ ವಾಹನಗಳ ಮತ್ತು ಆಸ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.