ಸಂಡೂರು: ತಾಲ್ಲೂಕಿನ ತೋರಣಗಲ್ಲು ಗ್ರಾಮದ ಬಳಿಯ ಜಿಂದಾಲ್ ಕಾರ್ಖಾನೆಯ ಘಟಕವೊಂದರಲ್ಲಿ ಬೆಂಕಿ ಹೊತ್ತಿ ಉರಿಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಘಟಕದಲ್ಲಿ ಅಪಾರ ಪ್ರಮಾಣದ ಬೆಂಕಿ ಕಾಣಿಸಿಕೊಂಡು ದಟ್ಟವಾಗಿ ಹೊಗೆ ಹೊರ ಹೊಮ್ಮುವುದು ಕಂಡು ಜಿಂದಾಲ್ ಸುತ್ತಲಿನ ಗ್ರಾಮಗಳಲ್ಲಿನ ಜನರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಜಿಂದಾಲ್ ಕಾರ್ಖಾನೆಯ ಕಲುಶಿತ ಹೊಗೆಯು ನಿರಂತರವಾಗಿ ಹರಡುವುದರ ಮೂಲಕ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.