
ಹೂವಿನಹಡಗಲಿ: ‘ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬೆಲೆ ಕುಸಿದಿದ್ದು, ಸರ್ಕಾರ ಕೂಡಲೇ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯಲ್ಲಿ ಖರೀದಿಸಬೇಕು’ ಎಂದು ಅಖಿಲ ಭಾರತ ಕಿಸಾನ್ ಸಭಾ ಆಗ್ರಹಿಸಿದೆ.
ಸಂಘಟನೆಯ ಮುಖಂಡರು ಸೋಮವಾರ ತಾಲ್ಲೂಕು ಕಚೇರಿಗೆ ತೆರಳಿ ಉಪ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
‘ಈಚೆಗೆ ಅತಿವೃಷ್ಟಿಯಿಂದ ಭತ್ತ, ಮೆಕ್ಕೆಜೋಳ ಇತರೆ ಬೆಳೆಗಳು ಹಾನಿಗೀಡಾಗಿವೆ. ಸಮೀಕ್ಷೆ ನಡೆಸಿ ಸಂತ್ರಸ್ತ ರೈತರಿಗೆ ಪರಿಹಾರ ನೀಡಬೇಕು. ಸರ್ಕಾರಿ ಭೂಮಿ ಸಾಗುವಳಿ ಮಾಡುತ್ತಾ ಬಂದಿರುವ ರೈತರಿಗೆ ಅಕ್ರಮ ಸಕ್ರಮ ಯೋಜನೆಯಡಿ ಹಕ್ಕುಪತ್ರ ನೀಡಬೇಕು. ರೈತರ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು’ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕಿಸಾನ್ ಸಭಾ ಪದಾಧಿಕಾರಿಗಳಾದ ಹಲಗಿ ಸುರೇಶ, ಬಾವಾಜಿ ಜಂಗ್ಲಿಸಾಬ್, ರೈತ ಸಂಘದ ಕಾರ್ಯದರ್ಶಿ ಎಂ.ಶಿವರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.