ADVERTISEMENT

ಹೊಸಪೇಟೆ | ಕುಸಿದು ಬಿದ್ದ ನಿರ್ಮಾಣ ಹಂತದ ಮೇಲು ಸೇತುವೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 12:32 IST
Last Updated 27 ಜುಲೈ 2020, 12:32 IST
ಹೊಸಪೇಟೆಯಲ್ಲಿ ಕುಸಿದಿರುವ ನಿರ್ಮಾಣ ಹಂತದ ಮೇಲು ಸೇತುವೆ
ಹೊಸಪೇಟೆಯಲ್ಲಿ ಕುಸಿದಿರುವ ನಿರ್ಮಾಣ ಹಂತದ ಮೇಲು ಸೇತುವೆ   

ಹೊಸಪೇಟೆ: ಇಲ್ಲಿನ ಆರ್‌ಟಿಒ ಕಚೇರಿ ಬಳಿ ತುಂಗಭದ್ರಾ ಜಲಾಶಯದ ಮೇಲ್ಮಟ್ಟದ ಕಾಲುವೆಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಮೇಲು ಸೇತುವೆ ಸೋಮವಾರ ಸಂಜೆ ಏಕಾಏಕಿ ಕುಸಿದು ಬಿದ್ದಿದೆ.

ಸೇತುವೆಯ ಒಂದು ಭಾಗದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನೊಂದು ಭಾಗದಲ್ಲಿ ಸೋಮವಾರ ಕೆಲಸ ನಡೆಯುತ್ತಿರುವಾಗ ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾರಿಗೂ ಏನೂ ಆಗಿಲ್ಲ. ಕೆಲಸ ನಿರ್ವಹಿಸುತ್ತಿದ್ದ 15ರಿಂದ 20 ಜನ ಕಾರ್ಮಿಕರು ಸುರಕ್ಷಿತವಾಗಿದ್ದಾರೆ.

ಈ ಸಂಬಂಧ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಕಿಶೋರ್‌ ಅವರನ್ನು ಸಂಪರ್ಕಿಸಿದಾಗ ಅವರು ಮಾಹಿತಿಗೆ ಲಭ್ಯರಾಗಲಿಲ್ಲ.

ADVERTISEMENT

ಹಳೆಯ ಸೇತುವೆ ಶಿಥಿಲಗೊಂಡಿದ್ದರಿಂದ ಲೋಕೋಪಯೋಗಿ ಇಲಾಖೆಯು ಅದನ್ನು ನೆಲಸಮಗೊಳಿಸಿ, ಹೊಸ ಸೇತುವೆ ನಿರ್ಮಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.