ಸಂಡೂರು: ತಾಲ್ಲೂಕಿನ ತೋರಣಗಲ್ಲು ಗ್ರಾಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದವಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಬಾಲಕಿಯ ಕುಟುಂಬದವರಿಗೆ ₹25ಲಕ್ಷ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಡಿವೈಎಫ್‍ಐ ಸಂಘಟನೆಯ ಮುಖಂಡರು, ಬಾಲಕಿಯ ಪೋಷಕರು ಸಂಡೂರಿನ ತಹಶೀಲ್ದಾರ್ ಜಿ.ಅನಿಲ್‍ಕುಮಾರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಡಿವೈಎಫ್‍ಐ ಸಂಘಟನೆಯ ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಎಚ್.ಸ್ವಾಮಿ ಮಾತನಾಡಿ, ‘ತೋರಣಗಲ್ಲು ಗ್ರಾಮ ಸೇರಿದಂತೆ ಸುತ್ತಲಿನ ಸ್ಥಳಗಳಲ್ಲಿ ಸಣ್ಣ, ಬೃಹತ್ ಪ್ರಮಾಣದ ಕೈಗಾರಿಕೆಗಳಿದ್ದು, ಹೆಚ್ಚು ಜನ ಸಂದಣಿಯ ಪ್ರದೇಶದವಾಗಿದ್ದರಿಂದ ಅಪರಾಧ ಕೃತ್ಯಗಳು ನಡೆಯುವುದು ಸಾಮಾನ್ಯವಾಗಿದೆ. ಮಹಿಳೆಯರ, ಮಕ್ಕಳ ಸುರಕ್ಷತೆಗಾಗಿ ತೋರಣಗಲ್ಲು ಗ್ರಾಮ, ರೈಲ್ವೆ ನಿಲ್ದಾಣ ಪ್ರದೇಶದಲ್ಲಿ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು’ ಎಂದು ಒತ್ತಾಯಿಸಿದರು.
‘ಸಂತ್ರಸ್ತೆಯ ಬಾಲಕಿಯ ಕುಟುಂಬದವರಿಗೆ ಈಗಾಗಲೇ ವಸತಿ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದಿಂದ ಆರ್ಥಿಕ ನೆರವು ಒದಗಿಸಲು ಸರ್ಕಾರ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು’ ಎಂದು ತಹಶೀಲ್ದಾರ್ ಜಿ.ಅನಿಲ್‍ಕುಮಾರ್ ಪ್ರತಿಕ್ರಿಯಿಸಿದರು.
ಮುಖಂಡರಾದ ನಾಗಭೂಷಣ್, ಶರೀಫ್ ಖಲಂದರ್ ಬಾಷಾ, ಬಾಲಕಿಯ ಪೋಷಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.