ಕೂಡ್ಲಿಗಿ: ತಾಲ್ಲೂಕಿನಲ್ಲಿ ರೈತರ ಬೆಳೆ ಸಮೀಕ್ಷೆಯ ಪ್ರಗತಿ ಕುಂಠಿತವಾಗಿದ್ದು, ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ತಹಶೀಲ್ದಾರ್ ಎಸ್.ಮಹಾಬಲೇಶ್ವರ ಸೂಚನೆ ನೀಡಿದರು.
ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಬೆಳೆ ಸಮಿಕ್ಷೆ ಆ್ಯಪ್ ಕುರಿತು ನಡೆದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿ, ನಿಗದಿತ ಸಮಯದಲ್ಲಿ ಮಾಡಿಸ ದಿದ್ದಲ್ಲಿ ರೈತರು ಸರ್ಕಾರದಿಂದ ದೊರೆಯುವ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ. ಸಮೀಕ್ಷೆದಾರರು ರೈತರ ಜಮೀನು ಗಳಿಗೆ ಬೆಳೆ ಸಮೀಕ್ಷೆ ಮಾಡಿಸಬೇಕು. ಇದಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಸಹಕಾರ ನೀಡಬೇಕು ಎಂದರು.
ಸಹಾಯಕ ಕೃಷಿ ನಿರ್ದೇಶಕ ಎನ್.ವಿ.ಪ್ರಕಾಶ್, ಕೃಷಿ ಇಲಾಖೆಯ ಗುರುಬಸವರಾಜ ಚಿಲಗೋಡು, ಎಚ್.ಶ್ರವಣಕುಮಾರ್, ಷಣ್ಮುಖ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.