ADVERTISEMENT

ಬಳ್ಳಾರಿ: ಗುಂಪು ಘರ್ಷಣೆ ಆತಂಕ; 2 ಗ್ರಾಮಗಳಲ್ಲಿ ಗಣೇಶ ಪ್ರತಿಷ್ಠಾಪನೆ ನಿಷೇಧ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 3:48 IST
Last Updated 27 ಆಗಸ್ಟ್ 2025, 3:48 IST
   

ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.

ನಂ.15 ಗೋನಾಳ್ ಮತ್ತು ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ದ್ವೇಷ, ಹಗೆತನವನ್ನು ಯಾವುದಾದರೊಂದು ರೀತಿಯಲ್ಲಿ ತೀರಿಸಿಕೊಳ್ಳಲು ಗುಂಪುಗಳು ಸಮಯಕ್ಕಾಗಿ ಕಾದಿರುವ ಸಂಶಯ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.