ಬಳ್ಳಾರಿ: ಗೌರಿ ಗಣೇಶ ಹಬ್ಬವನ್ನು ಸಂಭ್ರಮ– ಸಡಗರದಿಂದ ಆಚರಿಸಲು ಬಳ್ಳಾರಿ ಜಿಲ್ಲೆಯ ನಗರದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾಗಿರುವ ವಿಗ್ರಹ, ಹೂವು, ಹಣ್ಣು, ಪೂಜಾ ಸಾಮಗ್ರಿಗಳು, ಅಗತ್ಯ ವಸ್ತುಗಳ ಖರೀದಿ ಭರಾಟೆ ಶುಕ್ರವಾರ ಜೋರಾಗಿ ನಡೆಯಿತು.
ನಗರದ ಎಪಿಎಂಸಿ ಮಾರುಕಟ್ಟೆ, ಬೆಂಗಳೂರು ರಸ್ತೆ , ಕನಕ ದುರ್ಗಮ್ಮ ದೇವಸ್ಥಾನ ಬಳಿ, ಹೂವಿನ ಮಾರುಕಟ್ಟೆ, ಕೌಲ್ ಬಜಾರ್, ಗಾಂಧಿನಗರ ಮಾರುಕಟ್ಟೆಯಲ್ಲಿ ಜನ ಪೂಜಾ ಸಾಮಗ್ರಿಗಳ ಖರೀದಿಯಲ್ಲಿ ಮಗ್ನರಾಗಿದ್ದರು.
ಹಣ್ಣು- ತರಕಾರಿ, ಹೂ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದರೂ ಗ್ರಾಹಕರು ಖರೀದಿಗೆ ಮುಗಿ ಬಿದ್ದಿದ್ದಾರೆ. ಕನಕಾಂಬರ, ಮಲ್ಲಿಗೆ, ಕಾಕಡ, ಸೇವಂತಿಗೆ ಮತ್ತು ಚೆಂಡು ಹೂ ದರ ತುಸು ಹೆಚ್ಚಾಗಿದೆ. ಮತ್ತೊಂದೆಡೆ, ಜನರು ಪರಿಸರ ಸ್ನೇಹಿ ಗಣಪತಿ ಖರೀದಿಗೆ ಒಲವು ತೋರಿಸುತ್ತಿದ್ದಾರೆ.
ಹೂ -ಹಣ್ಣು, ತರಕಾರಿ ಬೆಲೆ ಹೆಚ್ಚಾಗಿದೆ. ಹಬ್ಬ ಮಾಡಬೇಕು ಎಂದು ಬೆಲೆ ಹೆಚ್ಚಿದ್ದರೂ ಅಗತ್ಯ ವಸ್ತುಗಳನ್ನು ಕಡಿಮೆ ಪ್ರಮಾಣದಲ್ಲಿ ಖರೀದಿ ಮಾಡುತ್ತಿದ್ದೇವೆ ಎಂದು ಹೇಳಿದರು.
ಈ ಬಾರಿ ಮಣ್ಣಿನಿಂದ ಮಾಡಿರುವ ಗಣಪತಿಮೂರ್ತಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದೇವೆ. ಪಿಒಪಿ ಗಣೇಶಮೂರ್ತಿಗಳನ್ನು ನಾವು ಮಾರಾಟ ಮಾಡುವುದಿಲ್ಲ. ₹50ನಿಂದ ಒಂದು ಸಾವಿರದ ವರೆಗೆ ಗಣೇಶಮೂರ್ತಿಗಳನ್ನು ಮಾರಾಟ ಮಾಡುತ್ತಿದ್ದೇವೆ’ ಎಂದು
ಗಣೇಶಮೂರ್ತಿ ವ್ಯಾಪಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.