ಸಂಡೂರು: ತಾಲ್ಲೂಕಿನ ವಡ್ಡು ಗ್ರಾಮ ಪಂಚಾಯಿತಿಗೆ ಸೇರಿದ ಕಸ ವಿಲೇವಾರಿ ವಾಹನವು ಕಳೆದೊಂದು ವಾರದಿಂದ ಗ್ರಾಮದಲ್ಲಿನ ಕಸ ಸಂಗ್ರಹಿಸದೆ ಪಂಚಾಯಿತಿ ಆವರಣದಲ್ಲಿ ನಿಂತಿದ್ದು, ಪಂಚಾಯಿತಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಗ್ರಾಮದಲ್ಲಿ ಸಂಗ್ರಹಿಸಿದ ಕಸ ವಿಲೇವಾರಿಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳದ ಕೊರತೆ ಉಂಟಾಗಿದ್ದರಿಂದ ವಾಹನವನ್ನು ಪಂಚಾಯಿತಿ ಆವರಣದಲ್ಲಿ ನಿಲ್ಲಿಸಲಾಗಿದೆ. ಕಳೆದೊಂದು ವಾರದಿಂದ ಮನೆಯಲ್ಲೇ ಕಸ ಇಟ್ಟುಕೊಂಡಿದ್ದು, ದುರ್ನಾಥ ಬೀರುತ್ತಿದೆ. ಆದಷ್ಟು ಬೇಗ ವಿಲೇವಾರಿ ಮಾಡಬೇಕು’ ಎಂದು ವಡ್ಡು ಗ್ರಾಮದ ನಿವಾಸಿ ಸಿ.ಹೊನ್ನಳಪ್ಪ ಒತ್ತಾಯಿಸಿದರು.
ಗ್ರಾಮದ ಎಲ್ಲ ವಾರ್ಡ್‍ಗಳಲ್ಲಿ ಕಸವನ್ನು ಸಕಾಲಕ್ಕೆ ಸಂಗ್ರಹಿಸಿ, ವಿಲೇವಾರಿ ಮಾಡುವಂತೆ ಅಧಿಕಾರಿ, ಸಿಬ್ಬಂದಿಗೆ ಕಟ್ಟುನಿಟ್ಟಾಗಿ ತಿಳಿಸಲಾಗುವುದು’ ಎಂದು ಸಂಡೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನಬಸಪ್ಪ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.