ಕಂಪ್ಲಿ: ಪಟ್ಟಣದ 2ನೇ ವಾರ್ಡ್ ಆದೋನಿ ಮಸೀದಿ ಬಳಿ ಬುಧವಾರ ರಾತ್ರಿ ಜಿ. ಇಷಾಕ್ ಅವರ ಮನೆ ಬಾಗಿಲ ಚಿಲಕದ ಕೊಕ್ಕೆ (ಬಕ್ಕಲ್) ಮುರಿದ ಕಳ್ಳರು ಮನೆಯಲ್ಲಿದ್ದ ಎರಡೂವರೆ ತೊಲ ಬಂಗಾರ, 30ತೊಲ ಬೆಳ್ಳಿ ಕಳ್ಳತನ ಮಾಡಿದ್ದಾರೆ.
ಮನೆಯವರು ಚಿಕಿತ್ಸೆಗೆಂದು ಬೆಂಗಳೂರಿಗೆ ತೆರಳಿದಾಗ ಈ ಘಟನೆ ನಡೆದಿದೆ. ಈ ಕುರಿತು ಇಲ್ಲಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.