ADVERTISEMENT

ಹೊಸಪೇಟೆ: ಭಾರೀ ಮಳೆ; ಗೋಡೆ ಕುಸಿದು ಸಾವು

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 13:07 IST
Last Updated 24 ಸೆಪ್ಟೆಂಬರ್ 2019, 13:07 IST
ಹೊಸಪೇಟೆ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ಗೋಡೆ ಕುಸಿದು ಬಿದ್ದಿದ್ದು, ಅದರಡಿ ಮಲಗಿದ್ದ ದ್ಯಾಮಪ್ಪ ಎಂಬುವರು ಸಾವನ್ನಪ್ಪಿದ್ದಾರೆ–ಪ್ರಜಾವಾಣಿ ಚಿತ್ರ
ಹೊಸಪೇಟೆ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ಗೋಡೆ ಕುಸಿದು ಬಿದ್ದಿದ್ದು, ಅದರಡಿ ಮಲಗಿದ್ದ ದ್ಯಾಮಪ್ಪ ಎಂಬುವರು ಸಾವನ್ನಪ್ಪಿದ್ದಾರೆ–ಪ್ರಜಾವಾಣಿ ಚಿತ್ರ   

ಮರಿಯಮ್ಮನಹಳ್ಳಿ/ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಸೋಮವಾರ ರಾತ್ರಿ ಮಳೆಯಾಗಿದ್ದು, ತಾಲ್ಲೂಕಿನ ಹನುಮನಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ದ್ಯಾಮಪ್ಪ (75) ಎಂಬುವರು ಸಾವನ್ನಪ್ಪಿದ್ದಾರೆ.

ರಾತ್ರಿಯಿಡೀ ಸುರಿದ ಮಳೆಗೆ ಗೋಡೆ ನೆನೆದು, ಬೆಳಗಿನ ಜಾವ ಕುಸಿದಿದ್ದು, ಮನೆಯಲ್ಲಿ ಮಲಗಿಕೊಂಡಿದ್ದ ದ್ಯಾಮಪ್ಪನವರ ಮೇಲೆ ಬಿದ್ದದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಎಚ್.ವಿಶ್ವನಾಥ್, ಗ್ರಾಮ ಲೆಕ್ಕಿಗರಾದ ಶಾರದಮ್ಮ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎನ್.ಮಂಜುನಾಥ್, ಪಿ.ಎಸ್‍.ಐ. ಎಂ.ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಸೋಮವಾರ ಸಂಜೆ ಜಿಟಿಜಿಟಿಯಾಗಿ ಸುರಿಯಲು ಆರಂಭಿಸಿದ ಮಳೆ ಮಂಗಳವಾರ ಬೆಳಿಗ್ಗೆ ಒಂಬತ್ತು ಗಂಟೆಯವರೆಗೆ ಎಡೆಬಿಡದೆ ಸುರಿದಿದೆ. ಕೆಲವೊಮ್ಮೆ ಜಿಟಿಜಿಟಿ, ಕೆಲವೊಮ್ಮೆ ಬಿರುಸಿನ ಮಳೆಯಾಗಿದ್ದರಿಂದ ನಗರದಲ್ಲಿನ ಚರಂಡಿಗಳು ಉಕ್ಕಿ ಹರಿದಿವೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತುಕೊಂಡಿತ್ತು.

ತಾಲ್ಲೂಕಿನ ಗಾಳೆಮ್ಮನಗುಡಿಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ತೊಂದರೆ ಅನುಭವಿಸಿದರು. ತಾಲ್ಲೂಕಿನ ಹಂಪಿ, ಕಮಲಾಪುರ, ಸೀತಾರಾಮ ತಾಂಡ, ಬೈಲುವದ್ದಿಗೇರಿ, ಧರ್ಮಸಾಗರ, ರಾಮಸಾಗರ, ಕಾಕುಬಾಳು, ವಡ್ಡರಹಳ್ಳಿ, ಬಸವನದುರ್ಗ, ನಾಗೇನಹಳ್ಳಿ, ಹೊಸೂರು, ಕಾರಿಗನೂರು, ವ್ಯಾಸನಕೆರೆ, ಮರಿಯಮ್ಮನಹಳ್ಳಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.