ADVERTISEMENT

ಹೂವಿನಹಡಗಲಿ | ಸಾಮಾಜಿಕ ಮಾಧ್ಯಮದಲ್ಲಿ ನೌಕರರ ತೇಜೋವಧೆ: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 5:26 IST
Last Updated 19 ಸೆಪ್ಟೆಂಬರ್ 2025, 5:26 IST
ಹೂವಿನಹಡಗಲಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ, ಶಿರಸ್ತೇದಾರ ಸಲೀಂ ಅವರಿಗೆ ಮನವಿ ಸಲ್ಲಿಸಲಾಯಿತು
ಹೂವಿನಹಡಗಲಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ, ಶಿರಸ್ತೇದಾರ ಸಲೀಂ ಅವರಿಗೆ ಮನವಿ ಸಲ್ಲಿಸಲಾಯಿತು   

ಹೂವಿನಹಡಗಲಿ: ಸಂಘಟನೆಗಳ ಹೆಸರಲ್ಲಿ ಕೆಲವರು ಸರ್ಕಾರಿ ಅಧಿಕಾರಿ, ನೌಕರರನ್ನು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನ ಮಾಡಿ, ನೌಕರರ ಘನತೆಗೆ ಧಕ್ಕೆ ತಂದಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಕೊಟ್ರಗೌಡ ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿ ಗುರುವಾರ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಇಒ ಪರಮೇಶ್ವರಪ್ಪ ಮಾತನಾಡಿ, ಕೆಲವರ ಕಿರುಕುಳದಿಂದ ಕಚೇರಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಆಗುತ್ತಿಲ್ಲ. ಉತ್ತಮ ಆರ್‌ಟಿಐ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನೌಕರರ ಸ್ವಾಭಿಮಾನಕ್ಕೆ ಧಕ್ಕೆ ತರುವವರಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನವೀನ್, ಖಜಾನೆ ಅಧಿಕಾರಿ ವಾಗೀಶ, ಬಿಇಒ ಮಹೇಶ ಪೂಜಾರ್, ಶಿಕ್ಷಕರ ಸಂಘದ ಅಧ್ಯಕ್ಷ ವಿ.ಬಿ.ಜಗದೀಶ, ಪಿಡಿಒ ಶಶಿಕಲಾ ಕೊಪ್ಪದ, ನರೇಗಾ ಸಹಾಯಕ ನಿರ್ದೇಶಕ ವೀರಣ್ಣನಾಯ್ಕ ಮಾತನಾಡಿದರು.

ಪ್ರತಿಭಟನೆಯಲ್ಲಿ ಸರ್ಕಾರಿ, ಅರೆ ಸರ್ಕಾರಿ ನೌಕರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.