ADVERTISEMENT

ಸಾರಿಗೆ ಬಸ್‌ ಬಳಸುವಂತೆ ಜಾಗೃತಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 14:50 IST
Last Updated 6 ಫೆಬ್ರುವರಿ 2019, 14:50 IST
ಬಳ್ಳಾರಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಣಗರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಎ.ಸತೀಶ್ ಕುಮಾರ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಟಿಕೆಟ್ ಪಡೆದು ಸಂಚರಿಸಿದರು
ಬಳ್ಳಾರಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಣಗರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಎ.ಸತೀಶ್ ಕುಮಾರ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಟಿಕೆಟ್ ಪಡೆದು ಸಂಚರಿಸಿದರು   

ಬಳ್ಳಾರಿ: ಸಂಚಾರ ದಟ್ಟಣೆಯನ್ನು ತಡೆಯಲು ಪ್ರಯಾಣಿಕರು ಖಾಸಗಿ ವಾಹನಗಳನ್ನುತೊರೆದು ಹೆಚ್ಚಾಗಿಸರ್ಕಾರಿ ಬಸ್‌ಗಳನ್ನು ಬಳಸುವಂತೆ ಪ್ರೋತ್ಸಾಹಿಸಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಬುಧವಾರ ಅಧಿಕಾರಿಗಳು ಸಂಚರಿಸಿ ಜಾಗೃತಿ ಮೂಡಿಸಿದರು.

ನಗರದ ಎಸ್‌ಪಿ ವೃತ್ತದಿಂದ ಕನಕ ದುರ್ಗಮ್ಮ ದೇವಸ್ಥಾನದವರೆಗೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ್, ಉಪವಿಭಾಗಾಧಿಕಾರಿ ರಮೇಶ್ ಕೋನರೆಡ್ಡಿ, ಕೆಎಸ್‌ಆರ್‌ಟಿಸಿ ಜಿಲ್ಲಾಧಿಕಾರಿ ಎಸ್.ಆರ್.ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಬಸ್‌ನಲ್ಲಿ ಹಣ ನೀಡಿ ಟಿಕೆಟ್ ಪಡೆದು ಸಂಚರಿಸಿ ಒಳಗಿರುವ ಸುರಕ್ಷಿತ ಸೌಕರ್ಯಗಳನ್ನು ಪರಿಶೀಲಿಸಿದರು.

ಸಾರಿಗೆ ಸಂಸ್ಥೆಯಿಂದ ಪ್ರತಿ ತಿಂಗಳ ಮೊದಲನೇಬುಧವಾರ ಸರ್ಕಾರಿ ಬಸ್‌ಗಳಲ್ಲಿವಿವಿಧ ಇಲಾಖೆಯ ಅಧಿಕಾರಿಗಳು ಸಂಚರಿಸಿ ಸಾರ್ವಜನಿಕರಿಗೆ ಮಾದರಿಯಾಗುತ್ತಿದ್ದಾರೆ. ನಗರದಲ್ಲಿ ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದರಿಂದ ಎಲ್ಲರೂ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದುಕೆಎಸ್‌ಆರ್‌ಟಿಸಿ ಜಿಲ್ಲಾಧಿಕಾರಿ ಎಸ್.ಆರ್.ಚಂದ್ರಶೇಖರ್ ಹೇಳಿದರು.

ADVERTISEMENT

ಇದರಿಂದ ನಗರದಸಂಚಾರ ದಟ್ಟಣೆ ಮತ್ತು ವಾಯುಮಾಲಿನ್ಯ ಮಟ್ಟ ಕಡಿಮೆಯಾಗಲಿದೆ.ಸರ್ಕಾರಿ ಬಸ್‌ಗಳ ಪ್ರಯಾಣ ಸುರಕ್ಷಿತ ಎನ್ನುವ ಸಂದೇಶ ಸಾರುವ ಉದ್ದೇಶದಿಂದ ಸಂಸ್ಥೆಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.