ADVERTISEMENT

ಪೊಲೀಸ್ ಠಾಣೆ ಹಸಿರೀಕರಣ ಕಾರ್ಯಕ್ರಮ ಆರಂಭ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 10:14 IST
Last Updated 2 ಸೆಪ್ಟೆಂಬರ್ 2021, 10:14 IST
‘ಗ್ರೀನ್‌ ಹೊಸಪೇಟೆ’ ಸಂಘಟನೆಯ ಕಾರ್ಯಕರ್ತರು ಗುರುವಾರ ಹೊಸಪೇಟೆಯ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಹಸಿರೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
‘ಗ್ರೀನ್‌ ಹೊಸಪೇಟೆ’ ಸಂಘಟನೆಯ ಕಾರ್ಯಕರ್ತರು ಗುರುವಾರ ಹೊಸಪೇಟೆಯ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಹಸಿರೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ಹೊಸಪೇಟೆ (ವಿಜಯನಗರ): ‘ಗ್ರೀನ್‌ ಹೊಸಪೇಟೆ’ ಸಂಸ್ಥೆ ಹಮ್ಮಿಕೊಂಡಿರುವ ನಗರದ ಎಲ್ಲ ಪೊಲೀಸ್‌ ಠಾಣೆಗಳ ಹಸಿರೀಕರಣ ಕಾರ್ಯಕ್ರಮ ಗುರುವಾರ ಆರಂಭಗೊಂಡಿತು.

ಸಂಘಟನೆಯ ಕಾರ್ಯಕರ್ತರು ಇಲ್ಲಿನ ಪಟ್ಟಣ ಹಾಗೂ ಗ್ರಾಮೀಣ ಪೊಲೀಸ್‌ ಠಾಣೆ ಆವರಣದಲ್ಲಿ ಸಸಿ ನೆಟ್ಟು ಹಸಿರೀಕರಣ ಕಾರ್ಯಕ್ರಮ ಆರಂಭಿಸಿದರು. ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ಎಂ. ಶ್ರೀನಿವಾಸ್‌, ಮೇಟಿ ಶ್ರೀನಿವಾಸ್‌ ಅವರಿಗೆ ಸಾಂಕೇತಿಕವಾಗಿ ಸಸಿ ವಿತರಿಸಿದರು.

ಸಂಘಟನೆಯ ಅಧ್ಯಕ್ಷ ಕೆ.ಸುನೀಲ್‍ಗೌಡ ಮಾತನಾಡಿ, ‘ನಗರದ ಎಲ್ಲಾ ಸರ್ಕಾರಿ ಕಚೇರಿಗಳ ಹಸಿರೀಕರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಪೊಲೀಸ್‌ ಠಾಣೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹಂತ ಹಂತವಾಗಿ ಎಲ್ಲ ಸರ್ಕಾರಿ ಕಚೇರಿಗಳಿಗೂ ವಿಸ್ತರಿಸಲಾಗುವುದು’ ಎಂದು ಹೇಳಿದರು.

ADVERTISEMENT

ಪೋಲಿಸ್ ಇನ್‌ಸ್ಪೆಕ್ಟರ್‌ ಮೇಟಿ ಶ್ರೀನಿವಾಸ್, ‘ಹಸಿರೀಕರಣ ಕಾರ್ಯಕ್ರಮವೂ ಒಳ್ಳೆಯ ಉದ್ದೇಶ ಹೊಂದಿದೆ. ಇದರಿಂದ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಹಕಾರಿ ಆಗಲಿದೆ. ಶುದ್ಧ ಗಾಳಿ ಸಿಗಲಿದೆ’ ಎಂದು ತಿಳಿಸಿದರು.

ಇನ್‌ಸ್ಪೆಕ್ಟರ್‌ ಎಂ.ಶ್ರೀನಿವಾಸ್ ಮಾತನಾಡಿ, ‘ಈ ಕಾರ್ಯಕ್ರಮದಿಂದ ಇಡೀ ನಗರ ಹಸಿರುಮಯವಾಗಲಿದೆ. ಇದಕ್ಕೆ ಎಲ್ಲರೂ ಸಹಕಾರ ಕೊಡಬೇಕಿದೆ’ ಎಂದರು. ಸಂಘಟನೆಯ ರವಿಜೈನ್, ಶಾಂತೇಶ್ ಕುಮಾರ್, ಪ್ರಕಾಶ್ ಶರ್ಮಾ, ರಾಘವೇಂದ್ರ, ಗಣೇಶ್, ರೆಬೆಕಾ, ವಿನಯಕುಮಾರ್, ಅಭಿಷೇಕ್, ಸತ್ಯ, ಸಿದ್ದು, ಶಿವುಕುಮಾರ್, ಪ್ರಜ್ವಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.