ಬಳ್ಳಾರಿ: ವಿವಿಧ ಉತ್ಪನ್ನಗಳು ಹಾಗೂ ಸೇವೆಗಳ ಮೇಲಿನ ತೆರಿಗೆ (ಜಿಎಸ್‌ಟಿ) ಪ್ರಮಾಣವನ್ನು ಕಡಿತಗೊಳಿಸಿರುವ ಪರಿಷ್ಕೃತ ಜಿಎಸ್‌ಟಿ ಸೋಮವಾರದಿಂದ ಜಾರಿಯಾಗಿದ್ದು, ಬಿಜೆಪಿಯು ನಗರದಲ್ಲಿ ಸಂಭ್ರಮಾಚರಣೆ ನಡೆಸಿತು.
ನಗರದ ಬ್ರೂಸ್‌ಪೇಟೆ ವೃತ್ತದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು. ಕೇಂದ್ರ ಸರ್ಕಾರದ ಪರ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಸೋಮಶೇಖರ ರೆಡ್ಡಿ, ‘ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆ ಮಾಡಿದೆ. ಈ ಮೂಲಕ ಸಾಮಾನ್ಯ ಜನರ ನೆರವಿಗೆ ಸರ್ಕಾರ ಧಾವಿಸಿದೆ. ಇದರಿಂದ ವ್ಯಾಪಾರಸ್ಥರಿಗೂ ಅನುಕೂಲವಾಗಿದೆ’ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ಕುಮಾರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿವಾಕರ್, ಮಹಿಪಾಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.