ADVERTISEMENT

ಬಳ್ಳಾರಿ | ಅತಿಥಿ ಉಪನ್ಯಾಸಕರ ನೇಮಕಾತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 4:10 IST
Last Updated 23 ಸೆಪ್ಟೆಂಬರ್ 2025, 4:10 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಬಳ್ಳಾರಿ: ‘ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗದ (ಯುಜಿಸಿ) ಮಾನದಂಡದಂತೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಹೈಕೋರ್ಟ್‌  ಉನ್ನತ ಶಿಕ್ಷಣ ಇಲಾಖೆಗೆ ಆದೇಶಿಸಿದ್ದರೂ, ನೇಮಕಾತಿಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ’ ಎಂದು ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಟಿ.ದುರುಗಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಕೋರ್ಟ್ ತೀರ್ಪು ಪ್ರಕಟಗೊಂಡು ಹದಿಮೂರು ದಿನಗಳು ಕಳೆದಿವೆ. ಆದರೂ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಯಾವುದೇ ತೀರ್ಮಾನ ಕೈಗೊಳ್ಳದೆ ಮೌನ ವಹಿಸಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯೆ ಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಸರ್ಕಾರ ನೇಮಕಾತಿಗೆ ಮುಂದಾಗದೇ ಹೋದರೆ, ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದರು

‘ರಾಜ್ಯ ಸರ್ಕಾರದ ವಿಳಂಬ ನೀತಿ, ನಿರ್ಲಕ್ಷ್ಯ ಧೋರಣೆಗೆ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟ ಅನುಭವಿಸುತ್ತಾ ನಲುಗಿ ಹೋಗಿದ್ದಾರೆ. ಎರಡು ತಿಂಗಳಿಂದ ವೇತನವಿಲ್ಲದೆ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು. 

ಅತಿಥಿ ಉಪನ್ಯಾಸಕರಾದ ಡಾ.ಕೆ.ಬಸಪ್ಪ, ರುದ್ರಮುನಿ, ಗೋವಿಂದ, ಎ.ಕೆ.ಮಾರಪ್ಪ, ಎಂ.ರಫೀ, ಎಸ್.ಎಂ.ರಮೇಶ್, ಗುರುರಾಜ್, ಡಾ.ಗಂಗಾಧರ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.