ADVERTISEMENT

ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 9:11 IST
Last Updated 23 ಸೆಪ್ಟೆಂಬರ್ 2020, 9:11 IST
ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯವರು ಬುಧವಾರ ಹೊಸಪೇಟೆಯ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯವರು ಬುಧವಾರ ಹೊಸಪೇಟೆಯ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು   

ಹೊಸಪೇಟೆ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯವರು ಬುಧವಾರ ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಬಳಿಕ ತಾಲ್ಲೂಕು ಕಚೇರಿಗೆ ತೆರಳಿ ಮುಖ್ಯಮಂತ್ರಿಯವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.

‘ರಾಜ್ಯದ 413 ಸರ್ಕಾರಿ ಪ್ರಥಮ ದರ್ಜೇ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಅವರಿಗೆ ಸೇವಾ ಭದ್ರತೆ ಇಲ್ಲ. ಸುಮಾರು ಮೂರು ದಶಕಗಳಿಂದ ‘ಅತಿಥಿ’ಗಳಾಗಿಯೇ ಕೆಲಸ ನಿರ್ವಹಿಸುತ್ತಿದ್ದು, ಬದುಕು ಅತಂತ್ರವಾಗಿದೆ’ ಎಂದು ಮನವಿಯಲ್ಲಿ ಗೋಳು ತೋಡಿಕೊಂಡಿದ್ದಾರೆ.

ADVERTISEMENT

‘2019ರ ಯುಜಿಸಿ ಸುತ್ತೋಲೆ ಪ್ರಕಾರ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಪ್ರತಿ ಬೋಧನಾ ಅವಧಿಗೆ ₹1,500 ಅಥವಾ ಮಾಸಿಕ ₹50,000 ವೇತನ ನಿಗದಿ ಮಾಡಬೇಕು. ಆದರೆ, ಇಂದಿಗೂ ಅದು ಜಾರಿಗೆ ಬಂದಿಲ್ಲ’ ಎಂದು ತಿಳಿಸಿದ್ದಾರೆ.

ಸಮಿತಿ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ, ರಾಜ್ಯ ಸಂಯೋಜಕಿ ಎಂ. ಉಮಾದೇವಿ, ಜಿಲ್ಲಾ ಸಂಚಾಲಕರಾದ ಪ್ರಶಾಂತ್‌ ಬಡಿಗೇರ್‌, ಪಂಪಾಪತಿ, ರವಿ, ಅತಿಥಿ ಉಪನ್ಯಾಸಕರಾದ ಕುಸುಮಾ, ಪದ್ಮಜಾ, ಷಣ್ಮುಖಪ್ಪ, ನಾಗಾರ್ಜುನ್‌, ಮಾರುತಿ, ಡಿ. ಬಸವರಾಜ, ದೀಪಕ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.