ADVERTISEMENT

ಹಡಪದ ಅಪ್ಪಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ: ಇ.ಬಾಲಕೃಷ್ಣಪ್ಪ ಅಭಿಮತ

ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯುತ್ಸವ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 6:03 IST
Last Updated 11 ಜುಲೈ 2025, 6:03 IST
   

ಹೊಸಪೇಟೆ: ‘ಬಸವಣ್ಣನವರ ಅನುಯಾಯಿಯಾಗಿದ್ದ ಹಡಪದ ಅಪ್ಪಣ್ಣನವರ ವಚನಗಳ ಸಾರವನ್ನರಿತು ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.

ಇಲ್ಗಿ ಗುರುವಾರ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

‘ಕಲ್ಯಾಣದಲ್ಲಿ ಸರ್ವ ಶಿವಶರಣರ ನಿಕಟ ಸಂಪರ್ಕ ಹೊಂದಿದ್ದ ಅಪ್ಪಣ್ಣ ಅವರು ಶುದ್ಧ ಮನಸ್ಸಿನ ಬಲದಿಂದ ಬಸವಣ್ಣನವರಿಗೆ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಅನುಭವ ಮಂಟಪದ ಪ್ರಧಾನ ಕಾರ್ಯದರ್ಶಿಯಂತೆ ಅವರು ಕೆಲಸ ಮಾಡಿದ್ದರು. ಸಮಾಜ ಸುಧಾರಣೆಗಾಗಿ, ಜಾತಿ, ಧರ್ಮ, ವರ್ಣ, ವರ್ಗರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು. ಅಸ್ಪೃಶ್ಯತೆ, ಜಾತಿ ವ್ಯವಸ್ಥೆ ವಿರುದ್ಧ ವಚನಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿದವರು’ ಎಂದು ಅವರು ಬಣ್ಣಿಸಿದರು.

ADVERTISEMENT

ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಶಿವಾನಂದ ಅವರು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.