ADVERTISEMENT

ಹಗರಿಬೊಮ್ಮನಹಳ್ಳಿ: ದಾಂಪತ್ಯಕ್ಕೆ ಕಾಲಿಟ್ಟ 12 ಜೋಡಿ

​ಪ್ರಜಾವಾಣಿ ವಾರ್ತೆ
Published 10 ಮೇ 2025, 13:42 IST
Last Updated 10 ಮೇ 2025, 13:42 IST
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕನ್ನಿಹಳ್ಳಿಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ವಧು–ವರರನ್ನು ಗಣ್ಯರು ಆಶೀರ್ವದಿಸಿದರು
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕನ್ನಿಹಳ್ಳಿಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ವಧು–ವರರನ್ನು ಗಣ್ಯರು ಆಶೀರ್ವದಿಸಿದರು   

ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಕನ್ನಿಹಳ್ಳಿಯಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವದ ಅಂಗವಾಗಿ ಹೇಮರಡ್ಡಿ ಮಲ್ಲಮ್ಮ ಟ್ರಸ್ಟ್, ನೌಕರರ ಸಂಘ ಮತ್ತು ಸೇವಾ ಸಮಿತಿಯು ಶನಿವಾರ ಹಮ್ಮಿಕೊಂಡಿದ್ದ 19ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 12 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ. ನೇಮರಾಜನಾಯ್ಕ, ‘ಪಟ್ಟಣದಲ್ಲಿ ರಡ್ಡಿ ಸಮುದಾಯ ಭವನ ನಿರ್ಮಾಣಕ್ಕೆ ಹಂತ ಹಂತವಾಗಿ ₹1.5 ಕೋಟಿ ಅನುದಾನ ನೀಡಲಾಗುವುದು. ಕ್ಷೇತ್ರದಲ್ಲಿ 100 ಚೆಕ್ ಡ್ಯಾಂ ನಿರ್ಮಿಸುವ ಗುರಿ ಇದೆ’ ಎಂದು ಹೇಳಿದರು.

ರಡ್ಡಿ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಸಿ. ಮೋಹನರೆಡ್ಡಿ ಮಾತನಾಡಿದರು. ಮರಿಯಮ್ಮನಹಳ್ಳಿಯ ಗುರುಪಾದ ದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ನಂದಿಪುರದ ಮಹೇಶ್ವರ ಸ್ವಾಮೀಜಿ, ಹಾಲಸಿದ್ದೇಶ್ವರ ಸ್ವಾಮೀಜಿ, ಹಂಪಸಾಗರದ ಶಿವಲಿಂಗರುದ್ರಮುನಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ADVERTISEMENT

ಟ್ರಸ್ಟ್ ಅಧ್ಯಕ್ಷ ಎ.ಟಿ.ಹನುಮನಗೌಡ, ನಿರ್ದೇಶಕ ಡಿ. ಉಮಾಪತಿ, ಎಂ. ಬಸವರೆಡ್ಡಿ, ಭರಮರೆಡ್ಡಿ, ನೆಲ್ಕುದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಟ್ನಾಳ್ ಸುರೇಶ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಗ್ರಾಮ ಆಡಳಿತಾಧಿಕಾರಿ ಯಂಕರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.