ADVERTISEMENT

ಹಗರಿಬೊಮ್ಮನಹಳ್ಳಿ: ಸಮೀಕ್ಷೆ; ಸಮಸ್ಯೆ ಪರಿಹಾರಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 4:49 IST
Last Updated 24 ಸೆಪ್ಟೆಂಬರ್ 2025, 4:49 IST
ಹಗರಿಬೊಮ್ಮನಹಳ್ಳಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೊಟ್ರೇಶ್ ನಾಯ್ಕ ಅವರಿಗೆ ಮನವಿ ಸಲ್ಲಿಸಿದರು 
ಹಗರಿಬೊಮ್ಮನಹಳ್ಳಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೊಟ್ರೇಶ್ ನಾಯ್ಕ ಅವರಿಗೆ ಮನವಿ ಸಲ್ಲಿಸಿದರು    

ಹಗರಿಬೊಮ್ಮನಹಳ್ಳಿ: ತಾಲ್ಲೂಕಿನಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆ ವೇಳೆ ಮ್ಯಾಪಿಂಗ್ ಸಮಸ್ಯೆಗೆ ಪರಿಹಾರ ಹಾಗೂ ಪರಸ್ಪರ ಸ್ಥಳ ಬದಲಾವಣೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೊಟ್ರೇಶ್ ನಾಯ್ಕ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಕೊಟ್ರಪ್ಪ ಮಾತನಾಡಿ, ‘ಶಿಕ್ಷಕರು ಕಾರ್ಯ ನಿರ್ವಹಿಸುವ ಸ್ಥಳದಲ್ಲೇ ಸಮೀಕ್ಷಾ ಕರ್ತವ್ಯ ನಡೆಸಲು ಅವಕಾಶ ಮಾಡಿಕೊಡಬೇಕು. ಸಮೀಕ್ಷೆದಾರರಿಗೂ ಸಮಗ್ರ ಕಿಟ್ ವಿತರಿಸಿ, ಮನೆಗಳ ಪಟ್ಟಿ ಒದಗಿಸಬೇಕು’ ಎಂದರು.

ಸಂಘದ ಖಜಾಂಚಿ ಹೀರ್ಯಾನಾಯ್ಕ, ಉಪಾಧ್ಯಕ್ಷ ಜೆ.ಹನುಮರೆಡ್ಡಿ, ನಿರ್ದೇಶಕರಾದ ದಾದೀಬಿ, ಟಿ. ಸೋಮಶೇಖರ್, ಇಟ್ಟಿಗಿ ಮಂಜುನಾಥ, ದೀಪಿಕಾ, ಸರ್ಕಾರಿ ನೌಕರರಸ ಸಂಘದ ಆಂಜನೇಯ, ಶಿಕ್ಷಕರಾದ ನಾಗರಾಜ, ಮೈಲಾರಪ್ಪ, ಎನ್‍ಪಿಎಸ್ ನೌಕರರ ಸಂಘದ ಅಧ್ಯಕ್ಷ ಅಣಜಿ ಮೋಹನ್ ಇದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.