ಹಗರಿಬೊಮ್ಮನಹಳ್ಳಿ: ಪಟ್ಟಣದ ಪೊಲೀಸ್ ಠಾಣೆಯ 4 ಪ್ರತ್ಯೇಕ ಎಲ್‌ಪಿಸಿ ಪ್ರಕರಣಗಳ ಆರೋಪಿಯಾದ ಪಟ್ಟಣದ ಇಲಿಯಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಳೆದ 14ವರ್ಷಗಳಿಂದ ತಲೆಮರೆಸಿಕೊಂಡಿದ್ದ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೆಬ್ಬೂರು ಗ್ರಾಮದಲ್ಲಿ ಹೆಸರು ಬದಲಾಯಿಸಿಕೊಂಡು ವಾಸವಾಗಿದ್ದ.
ಡಿವೈಎಸ್‌ಪಿ ಮಲ್ಲೇಶಪ್ಪ ಮಲ್ಲಾಪುರ, ಸಿಪಿಐ ವಿಕಾಸ್ ಲಮಾಣಿ ಮುಂದಾಳತ್ವದಲ್ಲಿ ಪಿಎಸ್‌ಐಗಳಾದ ಬಸವರಾಜ ಅಡವಿಬಾವಿ, ಅಬ್ಬಾಸ್ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಿ ವೈಜ್ಞಾನಿಕ ತಂತ್ರಜ್ಞಾನ ಬಳಸಿ ಸತತ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ತಂಡದಲ್ಲಿ ಶ್ರೀರಾಮಾಂಜನೇಯ, ಸಿದ್ದಪ್ಪ, ಶಿವಾನಂದ, ಹನುಮಂತಪ್ಪ, ದೊಡ್ಡಬಸವರಾಜ, ಮಹೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.