ADVERTISEMENT

ಹಂಪಿ ಕನ್ನಡ ವಿ.ವಿ. ಪ್ರಾಧ್ಯಾಪಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 12:40 IST
Last Updated 28 ಮಾರ್ಚ್ 2023, 12:40 IST
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರನ್ನು ಸನ್ಮಾನಿಸಿ ಮಾತನಾಡಿದ ಕುಲಪತಿ ಪ್ರೊ.ಡಿ.ವಿ. ಪರಮಶಿವಮೂರ್ತಿ
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರನ್ನು ಸನ್ಮಾನಿಸಿ ಮಾತನಾಡಿದ ಕುಲಪತಿ ಪ್ರೊ.ಡಿ.ವಿ. ಪರಮಶಿವಮೂರ್ತಿ   

ಹೊಸಪೇಟೆ (ವಿಜಯನಗರ): ವಿವಿಧ ವಲಯಗಳಲ್ಲಿ ಪ್ರಶಸ್ತಿ ಪುರಸ್ಕೃತರಾದ ಪ್ರಾಧ್ಯಾಪಕರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ನೆರವೇರಿಸಿ ಮಾತನಾಡಿದ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ಪ್ರಶಸ್ತಿ ಮತ್ತು ಪುರಸ್ಕಾರಗಳು ನಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ಕೆಲಸ ಮಾಡಲು ಹುರುಪು ತುಂಬುತ್ತವೆ. ನಮ್ಮಲ್ಲಿ ಆತ್ಮವಿಶ್ವಾಸ ಮತ್ತು ಹೊಸ ಚೈತನ್ಯ ತುಂಬುತ್ತವೆ ಎಂದರು.

ನಮ್ಮ ವಿಶ್ವವಿದ್ಯಾಲಯದ ಅಧ್ಯಾಪಕರು ಶ್ರಮ ಪೂರಕವಾಗಿ ಪ್ರಶಸ್ತಿ ಪಡೆದಿರುವುದು ನಮಗೆ ಹೆಮ್ಮೆಯ ಸಂಗತಿ. ವಿಶ್ವವಿದ್ಯಾಲಯದ ಅಧ್ಯಾಪಕರು ವಿವಿಧ ಕ್ಷೇತ್ರಗಳ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ನಮ್ಮ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿ ಹುಸೇನ್ ಅವರಿಗೆ ಕರ್ನಾಟಕ ಸರ್ಕಾರ ಜಕಣಾಚಾರಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಸಂತಸ ತಂದಿದೆ. ಬರುವ ದಿನಗಳಲ್ಲಿ ಅವರಿಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಎ. ಸುಬ್ಬಣ್ಣ ರೈ, ವಿಶ್ವವಿದ್ಯಾಲಯದಲ್ಲಿ ಅಧ್ಯಯನದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ವಿ.ವಿ. ಅಧ್ಯಾಪಕರು ಉತ್ತಮ ಕೆಲಸ ಮಾಡಿ ಪ್ರಶಸ್ತಿಗೆ ಪಾತ್ರರಾಗಿರುವುದು ಸಂತಸ ತಂದಿದೆ. ಅವರನ್ನು ಗೌರವಿಸುವುದು ವಿ.ವಿ. ಜವಾಬ್ದಾರಿ ಕೂಡ ಹೌದು ಎಂದು ಹೇಳಿದರು.

ಪ್ರಾಧ್ಯಾಪಕರಾದ ಚಲುವರಾಜು, ಎಫ್.ಟಿ. ಹಳ್ಳಿಕೇರಿ, ಕೆ.ಎಂ. ಮೇತ್ರಿ, ಎ. ಮೋಹನ್ ಕುಂಟಾರ್, ಕೆ. ರವೀಂದ್ರನಾಥ, ಅಮರೇಶ ಯತಗಲ್ ಅವರನ್ನು ಸನ್ಮಾನಿಸಲಾಯಿತು. ವಿ.ವಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.