ADVERTISEMENT

ಹಂಪಿಯಲ್ಲಿ ಸಡಗರದ ಜೋಡಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 16:59 IST
Last Updated 16 ಏಪ್ರಿಲ್ 2022, 16:59 IST
ಹಂಪಿಯ ರಥಬೀದಿಯಲ್ಲಿ ಶನಿವಾರ ಸಂಜೆ ನಡೆದ ಜೋಡಿ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಚಿತ್ರ: ರಾಚಯ್ಯ ಎಸ್‌. ಸ್ಥಾವರಿಮಠ
ಹಂಪಿಯ ರಥಬೀದಿಯಲ್ಲಿ ಶನಿವಾರ ಸಂಜೆ ನಡೆದ ಜೋಡಿ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಚಿತ್ರ: ರಾಚಯ್ಯ ಎಸ್‌. ಸ್ಥಾವರಿಮಠ   

ಹೊಸಪೇಟೆ (ವಿಜಯನಗರ): ಹಂಪಿಯಲ್ಲಿ ಶನಿವಾರ ಸಂಜೆ ಬ್ರಹ್ಮ ರಥೋತ್ಸವ ಅತ್ಯಂತ ಸಡಗರ, ಸಂಭ್ರಮದಿಂದ ಜರುಗಿತು.

ಹಂಪಿಯ ರಥಬೀದಿಯಲ್ಲಿ ನಡೆದ ಪಂಪಾ ವಿರೂಪಾಕ್ಷೇಶ್ವರ ಸ್ವಾಮಿ, ಚಂದ್ರಮೌಳೇಶ್ವರ ಸ್ವಾಮಿಯ ಜೋಡಿ ರಥೋತ್ಸವಕ್ಕೆ ಸಾವಿರಾರು ಜನ ಸಾಕ್ಷಿಯಾದರು. ಕೋವಿಡ್‌ನಿಂದ ಎರಡು ವರ್ಷ ರಥೋತ್ಸವ ನಡೆದಿರಲಿಲ್ಲ. ಈ ವರ್ಷದ ರಥೋತ್ಸವ ಕಣ್ತುಂಬಿಕೊಳ್ಳಲು ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಬಂದಿದ್ದರು.

ಹಂಪಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ದೇವರ ಮೂರ್ತಿಗೆ ಪೂಜೆ ಸಲ್ಲಿಸಿದರು. ಬಳಿಕ ತೇರಿನಲ್ಲಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ಎಳೆಯಲಾಯಿತು. ಈ ವೇಳೆ ಭಕ್ತರು ಬಾಳೆಹಣ್ಣು, ಉತ್ತತ್ತಿ ತೂರಿ ಹರಕೆ ತೀರಿಸಿದರು. ಬೆಳಿಗ್ಗೆ ಮಡಿ ತೇರು ಎಳೆಯಲಾಯಿತು. ಇಡೀ ದಿನ ಹಂಪಿಯಲ್ಲಿ ಜನಜಾತ್ರೆ ಇತ್ತು. ದೇವರ ದರ್ಶನಕ್ಕೆ ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ಭಕ್ತರು ನಿಂತಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.