ADVERTISEMENT

ಹೊಸಪೇಟೆ: ಹಂಪಿ ಜೂ ರಸ್ತೆ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 16:23 IST
Last Updated 18 ಆಗಸ್ಟ್ 2021, 16:23 IST
ಕರ್ನಾಟಕ ಮೃಗಾಲಯದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ ಅವರು ಬುಧವಾರ ಹಂಪಿ ಜೂ ರಸ್ತೆ ಡಾಂಬರೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು
ಕರ್ನಾಟಕ ಮೃಗಾಲಯದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ ಅವರು ಬುಧವಾರ ಹಂಪಿ ಜೂ ರಸ್ತೆ ಡಾಂಬರೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು   

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರ ಸಮೀಪದ ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿನ (ಹಂಪಿ ಜೂ) ರಸ್ತೆ ಡಾಂಬರೀಕರಣ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು.

ಜಿಲ್ಲಾ ಖನಿಜ ನಿಧಿಯ ₹5 ಕೋಟಿಯಲ್ಲಿ 7 ಕಿ.ಮೀ ರಸ್ತೆ ಡಾಂಬರೀಕರಣಗೊಳ್ಳಲಿದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿಕುಮಾರ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ, ‘ಮೃಗಾಲಯದಲ್ಲಿ ಒಂದೊಂದಾಗಿ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಇದರಿಂದಾಗಿ ಪ್ರವಾಸಿಗರಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

ಮೃಗಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್‌. ಕಿರಣ್‌ ಕುಮಾರ್‌, ಕಮಲಾಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸೈಯದ್‌ ಅಮಾನುಲ್ಲಾ, ಸಚಿವ ಆನಂದ್‌ ಸಿಂಗ್‌ ಅವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್‌, ವಲಯ ಅರಣ್ಯ ಅಧಿಕಾರಿ ರಮೇಶ ಕುಮಾರ್‌, ಉಪ ಅರಣ್ಯ ಅಧಿಕಾರಿ ಪರಮೇಶ್ವರಯ್ಯ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.