ADVERTISEMENT

ಹೂವಿನಹಡಗಲಿ: ಮದಲಗಟ್ಟಿ ಆಂಜನೇಯಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 4:40 IST
Last Updated 8 ಡಿಸೆಂಬರ್ 2025, 4:40 IST
ಹೂವಿನಹಡಗಲಿ ತಾಲ್ಲೂಕು ಮದಲಗಟ್ಟಿಯಲ್ಲಿ ಆಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು
ಹೂವಿನಹಡಗಲಿ ತಾಲ್ಲೂಕು ಮದಲಗಟ್ಟಿಯಲ್ಲಿ ಆಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು   

ಹೂವಿನಹಡಗಲಿ: ತಾಲ್ಲೂಕಿನ ಮದಲಗಟ್ಟಿ ಕ್ಷೇತ್ರದಲ್ಲಿ ಭಾನುವಾರ ಸಂಜೆ ಆಂಜನೇಯ ಸ್ವಾಮಿಯ ರಥೋತ್ಸವ ವೈಭವದಿಂದ ಜರುಗಿತು.

ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ ‘ಜೈ ಶ್ರೀರಾಮ್ … ವೆಂಕಟರಮಣ ಗೋವಿಂದ... ಎಂಬ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಪ್ರಾರಂಭವಾಯಿತು. ರಥ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಬಾಳೆಹಣ್ಣು, ಎಸೆದು ಭಕ್ತಿ ಸಮರ್ಪಿಸಿದರು.

ಹೂವಿನಹಡಗಲಿ, ಮುಂಡರಗಿ ತಾಲ್ಲೂಕುಗಳ ಅಪಾರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ಬೆಳಗ್ಗೆ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅರ್ಚಕರು ಪೂಜಾ ವಿಧಿವಿಧಾನ ಪೂರೈಸಿದ ಬಳಿಕ ಅಗ್ನಿಕುಂಡ ಜರುಗಿತು.

ADVERTISEMENT

ರಥೋತ್ಸವ ಅಂಗವಾಗಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ, ವಾಯುಸ್ತುತಿ ಪುನಃಶ್ಚರಣ, ಅಷ್ಟೋತ್ತರ ನೆರವೇರಿತು. ದೇವಸ್ಥಾನ ಸಮಿತಿಯವರು, ಪ್ರಾಣರಾಜ ಉತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.