ಹರಪನಹಳ್ಳಿ: ತಾಲ್ಲೂಕಿನ ಅನಂತನಹಳ್ಳಿ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ತರಗತಿಗಳಲ್ಲಿ ಖಾಲಿಯಿರುವ 15 ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಬಳ್ಳಾರಿ ವತಿಯಿಂದ 2025-26ನೇ ಸಾಲಿನಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 7ನೇ ತರಗತಿಗೆ 3, 8ನೇ ತರಗತಿಯಲ್ಲಿ 8, 9ನೇ ತರಗತಿಯಲ್ಲಿ 4, ಒಟ್ಟು 15 ಸ್ಥಾನಗಳು ಖಾಲಿ ಉಳಿದಿವೆ. ಖಾಲಿ ಇರುವ ಸ್ಥಾನಗಳಿಗೆ ಕರ್ನಾಟಕ ಮೀಸಲಾತಿ ನಿಯಮಾನುಸಾರ ಪ್ರವೇಶ ಪರೀಕ್ಷೆ ನಡೆಯುತ್ತದೆ.
ಅರ್ಜಿಗಳನ್ನು ಅರ್ಹ ಅಭ್ಯರ್ಥಿಗಳು ಶಾಲಾ ಸಮಯದಲ್ಲಿ ಜೂನ್ 30ರ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯು ಜುಲೈ 7ರಂದು ಜರುಗುತ್ತದೆ. ಹೆಚ್ಚಿನ ಮಾಹಿತಿಗೆ 9880955078, 9611961461 ಸಂಪರ್ಕಿಸಲು ಮುಖ್ಯ ಶಿಕ್ಷಕ ಎಚ್.ಕೆ.ಚಂದ್ರಪ್ಪ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.