
ಹರಪನಹಳ್ಳಿ: ಇಲ್ಲಿಯ ನಗರಸಭೆಗೆ ಆಡಳಿತಾಧಿಕಾರಿಯಾಗಿ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರನ್ನು ನೇಮಿಸಿ ನಗರಾಭಿವೃದ್ದಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಅವರು ತಿದ್ದುಪಡಿ ಆದೇಶ ಹೊರಡಿಸಿದ್ದಾರೆ.
ನ.19ರಂದು ಹರಪನಹಳ್ಳಿ ಪುರಸಭೆಯ ಆಡಳಿತಾಧಿಕಾರಿಯಾಗಿ ಕಂದಾಯ ಇಲಾಖೆ ಉಪವಿಭಾಗಾಧಿಕಾರಿಯನ್ನು ನೇಮಿಸಿದ್ದರು. ಈಗ ಪುರಸಭೆ ಮೇಲ್ದರ್ಜೆ ಪಡೆದು ನಗರಸಭೆ ಆಗಿರುವ ಕಾರಣ, ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿಯನ್ನು ನೇಮಿಸಿ ಡಿ.24ರಂದು ಟಿ.ಮಂಜುನಾಥ ಆದೇಶಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಇಲ್ಲಿಯ ನಗರಸಭೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಗರಸಭೆಯ ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ.
ನಗರಸಭೆ ಆಡಳಿತ ಮಂಡಳಿ ಕುರಿತು ‘ನೂತನ ನಗರಸಭೆಗೆ ಆಡಳಿತಾಧಿಕಾರಿ ಯಾರು?’ ಎನ್ನುವ ಶೀರ್ಷಿಕೆಯಡಿ ನ.28ರಂದು ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.