ಅರಸೀಕೆರೆ: ಹೋಬಳಿಯ ಚಟ್ನಿಹಳ್ಳಿ ಗ್ರಾಮದ ನಿವಾಸಿ ಶಫಿ ಉಲ್ಲಾ (58) ಹೊಟ್ಟೆನೋವು ತಾಳಲಾರದೆ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಫಿ ಉಲ್ಲಾ ಕೆಲವು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ನಾಟಿ ಔಷಧಿ ತೆಗೆದುಕೊಳ್ಳುತ್ತಿದ್ದರು. ಹೊಟ್ಟೆ ನೋವಿಗೆ ಜಿಗುಪ್ಸೆಗೊಂಡು ಗ್ರಾಮದಲ್ಲಿರುವ ಹುಣಸೆ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪುತ್ರ ಮಹಮ್ಮದ್ ರಫೀಕ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.