ADVERTISEMENT

ತುಂಗಭದ್ರಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 15:35 IST
Last Updated 25 ಜುಲೈ 2024, 15:35 IST
ಕಂಪ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರವಾಹ, ಪ್ರಕೃತಿ ವಿಕೋಪ ಮುಂಜಾಗ್ರತೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಶಿವರಾಜ, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು
ಕಂಪ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರವಾಹ, ಪ್ರಕೃತಿ ವಿಕೋಪ ಮುಂಜಾಗ್ರತೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಶಿವರಾಜ, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು   

ಕಂಪ್ಲಿ: ‘ತುಂಗಭದ್ರಾ ಜಲಾಶಯದಿಂದ ನದಿಗೆ ಯಾವುದೇ ಕ್ಷಣದಲ್ಲಿ ಹೆಚ್ಚಿನ ಪ್ರಮಾಣ ನೀರು ಹರಿದು ಬರುವ ಸಾಧ್ಯತೆ ಇರುವುದರಿಂದ ಪ್ರವಾಹ, ಪ್ರಕೃತಿ ವಿಕೋಪ ಎದುರಿಸಲು ತಾಲ್ಲೂಕು ಆಡಳಿತ ಸಜ್ಜಾಗಿದೆ’ ಎಂದು ತಹಶೀಲ್ದಾರ್ ಶಿವರಾಜ ತಿಳಿಸಿದರು.

ಇಲ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರವಾಹ, ಪ್ರಕೃತಿ ವಿಕೋಪ ಮುಂಜಾಗ್ರತೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪಟ್ಟಣದ ಕೋಟೆ ಪ್ರದೇಶದ ಜನವಸತಿ ಪ್ರದೇಶ ಮತ್ತು ನದಿ ಪಾತ್ರದಲ್ಲಿ ಎದುರಾಗುವ ವಿಪತ್ತುಗಳನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲ ಇಲಾಖೆ ಅಧಿಕಾರಿಗಳು ಎಚ್ಚರದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಶಿಕ್ಷಣ ಇಲಾಖೆ ಮತ್ತು ಸಿಡಿಪಿಒ ಇಲಾಖೆ ಪ್ರವಾಹ ಸಂತ್ರಸ್ತರಿಗೆ ‘ಕಾಳಜಿ ಕೇಂದ್ರ’ ಆರಂಭಿಸಲು, ಅಡುಗೆದಾರರು, ಅಡುಗೆ ಸಾಮಾನುಗಳ ತಯಾರಿ ಸೇರಿ ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಇ.ಒ ಆರ್.ಕೆ.ಶ್ರೀಕುಮಾರ್, ನರೇಗಾ ಎ.ಡಿ ಕೆ.ಎಸ್. ಮಲ್ಲನಗೌಡ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ್, ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ, ಪೊಲೀಸ್ ಇನ್‌ಸ್ಪೆಕ್ಟರ್ ಕೆ.ಬಿ. ವಾಸುಕುಮಾರ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಕಂಪ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರವಾಹ, ಪ್ರಕೃತಿ ವಿಕೋಪ ಮುಂಜಾಗ್ರತೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಶಿವರಾಜ ಮಾತನಾಡಿದರು. ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಕಂಪ್ಲಿ ಕೋಟೆ ಬಳಿ ಹರಿಯುವ ತುಂಗಭದ್ರಾನದಿಗೆ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಗುರುವಾರ ಸಂಜೆ ಸೇತುವೆ ಕೆಲವೇ ಅಡಿಗಳ ಅಂತರದಲ್ಲಿ ನೀರು ಹರಿಯುತ್ತಿರುವ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.