
ಪ್ರಜಾವಾಣಿ ವಾರ್ತೆ
ಡೆಂಗಿ
ಪ್ರಾತಿನಿಧಿಕ ಚಿತ್ರ
ಹೂವಿನಹಡಗಲಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 6 ವರ್ಷದೊಳಗಿನ 9 ಮಕ್ಕಳು ಶಂಕಿತ ಡೆಂಗಿ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಒಳ ರೋಗಿಗಳ ವಿಭಾಗದಲ್ಲಿ ಮಕ್ಕಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಕಿಟ್ ಬಳಸಿ 66 ಜನರನ್ನು ಡೆಂಗಿ ಪರೀಕ್ಷೆಗೆ ಒಳಪಡಿಸಲಾಗಿದೆ. ರಕ್ತ ಮಾದರಿಯನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ವರದಿ ಬಂದ ನಂತರವೇ ಡೆಂಗಿ ಜ್ವರದ ಬಗ್ಗೆ ನಿಖರ ಮಾಹಿತಿ ತಿಳಿಯಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಸಪ್ನಾ ಕಟ್ಟಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.