ADVERTISEMENT

ಹೂವಿನಹಡಗಲಿ ಪುರಸಭೆ ಚುನಾವಣೆ 30ಕ್ಕೆ: ಅಜ್ಞಾತ ಸ್ಥಳಕ್ಕೆ ತೆರಳಿದ ಸದಸ್ಯರು

​ಪ್ರಜಾವಾಣಿ ವಾರ್ತೆ
Published 24 ಜನವರಿ 2025, 13:37 IST
Last Updated 24 ಜನವರಿ 2025, 13:37 IST
<div class="paragraphs"><p>ಚುನಾವಣೆ</p></div>

ಚುನಾವಣೆ

   

(ಸಾಂದರ್ಭಿಕ ಚಿತ್ರ)

ಹೂವಿನಹಡಗಲಿ: ಇಲ್ಲಿನ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಜ. 30 ರಂದು ನಿಗದಿಯಾಗಿದೆ. ದಿನಾಂಕ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್, ಬಿಜೆಪಿಯ 12 ಸದಸ್ಯರು ಒಟ್ಟಾಗಿ ಅಜ್ಞಾತ ಸ್ಥಳಕ್ಕೆ ತೆರಳಿರುವುದು ಕುತೂಹಲ ಕೆರಳಿಸಿದೆ.

ADVERTISEMENT

2019ರಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 14 ಸ್ಥಾನಗಳಲ್ಲಿ ಗೆದ್ದು ಬಹುಮತ ಗಳಿಸಿದ್ದರೆ, ಬಿಜೆಪಿ 9 ಸ್ಥಾನಗಳಲ್ಲಿ ಗೆದ್ದಿದೆ. ಬದಲಾದ ರಾಜಕೀಯದಲ್ಲಿ ಎರಡೂ ಪಕ್ಷಗಳ ಕೆಲವು ಸದಸ್ಯರು ‘ನಿಷ್ಠೆ’ ಬದಲಿಸಿ ಎದುರಾಳಿ ಗುಂಪುಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಇದೀಗ ಬಿಜೆಪಿ, ಕಾಂಗ್ರೆಸ್ ನ 12 ಸದಸ್ಯರು ಅಜ್ಞಾತ ಸ್ಥಳಕ್ಕೆ ಪ್ರವಾಸ ತೆರಳಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಕೆಲವು ಸದಸ್ಯರ ಮೊಬೈಲ್‌ಗಳು ನಾಟ್ ರೀಚೆಬಲ್ ಆಗಿವೆ.

ಎರಡನೇ ಅವಧಿಯ ಅಧ್ಯಕ್ಷ ಸ್ಥಾನ ಒಬಿಸಿ ‘ಎ’ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಒಬಿಸಿ ‘ಬಿ’ ವರ್ಗಕ್ಕೆ ಮೀಸಲಾಗಿದೆ. ಕಳೆದ ಆಗಸ್ಟ್‌ನಲ್ಲಿ ಪ್ರಕಟವಾಗಿದ್ದ ಈ ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲ ಸದಸ್ಯರು ನ್ಯಾಯಾಲಯ ಮೆಟ್ಟಿಲೇರಿದ್ದರಿಂದ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಇದೀಗ ತಡೆಯಾಜ್ಞೆ ತೆರವಾಗಿದ್ದು, ಹಿಂದೆ ಪ್ರಕಟವಾಗಿದ್ದ ಮೀಸಲಾತಿ ಪ್ರಕಾರವೇ ಚುನಾವಣೆ ನಡೆಸಲು ಕೋರ್ಟ್ ಸಮ್ಮತಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.