
ಹೊಸಪೇಟೆ(ವಿಜಯನಗರ): ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಆಧುನಿಕ ದಿನಗಳಲ್ಲಿ ಕಾರ್ಯಭಾರದ ಒತ್ತಡಗಳ ನಿವಾರಣೆಗೆ, ಆರೋಗ್ಯವೃದ್ಧಿಗೆ ಹಾಗೂ ನೌಕರರ ಸುಪ್ತ ಪ್ರತಿಭೆಗಳ ಅನಾವರಣಕ್ಕೆ, ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಸಹಕಾರಿಯಾಗಲಿವೆ ಎಂದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಮಾತನಾಡಿದರು
ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗ್ರೇಸಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀಕಾಂತ ವಾಲ್ಮೀಕಿ, ಮಲ್ಲೇಶಪ್ಪ, ರಾಘವೇಂದ್ರ ಹೆಗಡಿಯಾಳ್, ಪಂಪಣ್ಣ, ಎಚ್.ರಾಜೀವ್, ಎಂ.ಪಿ.ಎಂ.ಅಶೋಕ, ಮುನಿವಾಸುದೇವರೆಡ್ಡಿ, .ಎಂ.ಪಿ.ಎಂ ಮಂಜುನಾಥ, ವೆಂಕಟೇಶ, ಎನ್.ಜೆ.ಮನೋಹರ, ಯೋಗೀಶ್ವರ ದಿನ್ನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.