ADVERTISEMENT

ಹೊಸಪೇಟೆ: ತುಂಗಭದ್ರಾ ಒಳಹರಿವು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 10:01 IST
Last Updated 22 ಜೂನ್ 2020, 10:01 IST
ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯ   

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆಗೆ ಎರಡು ದಿನಗಳಿಂದ ಉತ್ತಮ ರೀತಿಯಲ್ಲಿ ನೀರು ಹರಿದು ಬರುತ್ತಿದೆ.

ಸೋಮವಾರ 6,372 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಭಾನುವಾರ 3,522 ಕ್ಯುಸೆಕ್‌ ಒಳಹರಿವು ಇತ್ತು. ಶಿವಮೊಗ್ಗದ ತುಂಗಾ ಜಲಾಶಯ ಭರ್ತಿಯಾಗಿದೆ. ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಒಳಹರಿವು ಹೆಚ್ಚಾಗಿದೆ.

‘ಶಿವಮೊಗ್ಗ ಸುತ್ತಮುತ್ತ ಉತ್ತಮವಾಗಿ ಮಳೆಯಾಗುತ್ತಿದೆ. ಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗಬಹುದು. ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತುಂಗಭದ್ರಾ ಜಲಾಶಯ ಮಂಡಳಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ADVERTISEMENT

1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,585.58 ಅಡಿ ನೀರಿನ ಸಂಗ್ರಹವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.