ADVERTISEMENT

ಹೊಸಪೇಟೆ: ಅಸ್ಪೃಶ್ಯ ಸಮುದಾಯದವರಿಂದ ಪತ್ರ ಚಳವಳಿ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 10:39 IST
Last Updated 10 ಆಗಸ್ಟ್ 2020, 10:39 IST
ಪರಿಶಿಷ್ಟ ಜಾತಿ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಕೈಬಿಡುವಂತೆ ಆಗ್ರಹಿಸಿ ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಪತ್ರ ಚಳುವಳಿ ನಡೆಸಿದರು.
ಪರಿಶಿಷ್ಟ ಜಾತಿ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಕೈಬಿಡುವಂತೆ ಆಗ್ರಹಿಸಿ ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಪತ್ರ ಚಳುವಳಿ ನಡೆಸಿದರು.   

ಹೊಸಪೇಟೆ: ಪರಿಶಿಷ್ಟ ಜಾತಿ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಕೈಬಿಡುವಂತೆ ಆಗ್ರಹಿಸಿ ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ನಗರದ ಅಂಚೆ ಕಚೇರಿ ಎದುರು ಪತ್ರ ಚಳವಳಿ ನಡೆಸಿದರು.

ಬಳಿಕ ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಎರಡು ಸಾವಿರ ಮನವಿ ಪತ್ರಗಳನ್ನು ಅಂಚೆ ಪೆಟ್ಟಿಗೆಯೊಳಗೆ ಹಾಕಿ, ಘೋಷಣೆಗಳನ್ನು ಕೂಗಿದರು.

ಸ್ಪೃಶ್ಯ ಜಾತಿಗಳಾದ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್‌ ಹೇಳಿದೆ. ನ್ಯಾಯಾಲಯದ ತೀರ್ಪನ್ನು ಗೌರವಿಸಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಒಕ್ಕೂಟದ ಮುಖಂಡರಾದ ಎಂ.ಸಿ. ವೀರಸ್ವಾಮಿ, ನಿಂಬಗಲ್‌ ರಾಮಕೃಷ್ಣ, ಬಣ್ಣದಮನೆ ಸೋಮಶೇಖರ್‌, ಗ್ಯಾನಪ್ಪ ಬಡಿಗೇರ್‌, ಶಿವಕುಮಾರ ಗಂಗಪ್ಪ, ಕೊಟಗಿನಹಾಳು ಮಲ್ಲಿಕಾರ್ಜುನ, ಬಿ. ಮಾರೆಣ್ಣ, ಶೇಷು, ಭರತ್‌ ಕುಮಾರ್‌, ಶೇಕ್ಷಾವಲಿ, ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.