ADVERTISEMENT

ಹೊಸಪೇಟೆ: ಸಚಿವ ಆನಂದ್‌ ಸಿಂಗ್‌ ಮನೆ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 8:42 IST
Last Updated 20 ಜುಲೈ 2020, 8:42 IST
ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮನೆ ಎದುರು ಪ್ರತಿಭಟನೆ ನಡೆಸಿದರು.
ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮನೆ ಎದುರು ಪ್ರತಿಭಟನೆ ನಡೆಸಿದರು.   

ಹೊಸಪೇಟೆ: ಬೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಆಗ್ರಹಿಸಿ ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ನಗರದ ರಾಣಿಪೇಟೆಯಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮನೆ ಎದುರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು.

ಮೀಸಲಾತಿಯ ಪ್ರಯೋಜನ ಸ್ಪೃಶ್ಯ ಜಾತಿಗಳಿಗೆ ಸಿಗುತ್ತಿರುವುದರಿಂದ ಅಸ್ಪೃಶ್ಯ ಜಾತಿಗಳವರಿಗೆ ಅನ್ಯಾಯವಾಗುತ್ತಿದೆ. ಈ ವಿಷಯವನ್ನು ನ್ಯಾಯಾಲಯ ಕೂಡ ಹೇಳಿದೆ. ಹೀಗಿರುವಾಗ ಅದನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದು ಅಸ್ಪೃಶ್ಯ ಜಾತಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಮೂಲ ಅಸ್ಪೃಶ್ಯ ಜಾತಿಗಳ ಮೀಸಲು ಪ್ರಮಾಣವನ್ನು ಶೇ 15ರಿಂದ 20ಕ್ಕೆ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಒಕ್ಕೂಟದ ಮುಖಂಡರಾದ ಸೋಮೇಶಖರ್ ಬಣ್ಣದಮನೆ, ಸಣ್ಣ ಈರಪ್ಪ, ನಿಂಬಗಲ್ ರಾಮಕೃಷ್ಣ, ಮಲ್ಲಿಕಾರ್ಜುನ ಕಮಲಾಪುರ, ಎಚ್.ವೆಂಕಟೇಶ್, ಎಚ್.ಸಿ.ರವಿ, ನೀಲಕಂಠ, ಪ್ರಕಾಶ್, ಆನಂದ್, ರಾಮಚಂದ್ರಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.