ADVERTISEMENT

ಹೊಸಪೇಟೆ: ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 8:04 IST
Last Updated 19 ಜೂನ್ 2020, 8:04 IST
ಲಂಬಾಣಿ, ಭೋವಿ, ಕೊರಚ ಹಾಗೂ ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಆಗ್ರಹಿಸಿ ವಿಜಯನಗರ ಮಾದಿಗ ಸಮಾಜದ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಲಂಬಾಣಿ, ಭೋವಿ, ಕೊರಚ ಹಾಗೂ ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಆಗ್ರಹಿಸಿ ವಿಜಯನಗರ ಮಾದಿಗ ಸಮಾಜದ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.   

ಹೊಸಪೇಟೆ: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಲಂಬಾಣಿ, ಭೋವಿ, ಕೊರಚ ಹಾಗೂ ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಆಗ್ರಹಿಸಿ ವಿಜಯನಗರ ಮಾದಿಗ ಸಮಾಜದ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.

‘ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಒಳಮೀಸಲಿಗೆ ಆಗ್ರಹಿಸಿ ನಾಲ್ಕು ದಶಕಗಳಿಂದ ಹೋರಾಟ ನಡೆಸುತ್ತ ಬರಲಾಗಿದೆ. ಅದಕ್ಕೆ ಯಾವುದೇ ಸರ್ಕಾರ ಕಿವಿಗೊಟ್ಟಿಲ್ಲ. ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿರುವುದರಿಂದ ನ್ಯಾಯ ಸಿಗುವ ಭರವಸೆ ಸಿಕ್ಕಿದೆ. ಸ್ಪರ್ಶ ಜಾತಿಗಳಾದ ಲಂಬಾಣಿ, ಭೋವಿ, ಕೊರಚ ಹಾಗೂ ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರ ಅದನ್ನು ಅನುಷ್ಠಾನಕ್ಕೆ ತರಬೇಕು’ ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಸಂಘಟನೆಯ ಮುಖಂಡರಾದ ಎಂ.ಸಿ.ವೀರಸ್ವಾಮಿ, ತಿಪ್ಪಣ್ಣ, ಎಚ್‌. ಶೇಷು, ರಾಮಚಂದ್ರ, ಹುಲುಗಣ್ಣ, ಬಿ. ಮಾರೆಣ್ಣ, ಎಚ್.ಎಸ್. ಯಂಕಪ್ಪ, ಎಚ್.ಸೋಮಶೇಖರ್, ಸಿ.ಆರ್‌. ಭರತ್ ಕುಮಾರ್, ಹುಲುಗಪ್ಪ, ಎಸ್.ಬಿ. ಮಂಜುನಾಥ, ವೆಂಕಟೇಶ್, ಶರಣ, ತಾಯಪ್ಪ ದೊಡ್ಡಮನಿ, ಬಸವರಾಜ, ಶ್ರೀನಿವಾಸ, ನಿಂಬಗಲ್‍ ರಾಮಕೃಷ್ಣ, ಮಹಾಂತೇಶ್, ಮಲ್ಲಿಕಾರ್ಜುನ ಶೇಕ್ಷಾವಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.