ADVERTISEMENT

ಹೊಸಪೇಟೆ: ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 5:17 IST
Last Updated 2 ಜನವರಿ 2021, 5:17 IST
   

ಹೊಸಪೇಟೆ: ತಾಲ್ಲೂಕಿನ ಕಮಲಾಪುರದ ಎಚ್ ಪಿಸಿ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.

ಇತ್ತೀಚೆಗೆ ಇಂಗಳಗಿಯಲ್ಲಿ ಚಿರತೆ ದಾಳಿ ನಡೆಸಿದ್ದರಿಂದ ಕುರಿಗಾಹಿ ಗಂಭೀರವಾಗಿ ಗಾಯಗೊಂಡಿದ್ದರು. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದರಿಂದ ಜನ ಆತಂಕಗೊಂಡಿದ್ದರು.

ಚಿರತೆ ಸೆರೆ ಹಿಡಿದು ಬೇರೆಡೆ ಸಾಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರಿಂದ ಅರಣ್ಯ ಇಲಾಖೆಯವರು ಬೋನು ಇರಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.