ಹೊಸಪೇಟೆ (ವಿಜಯನಗರ): ಇಲ್ಲಿನ ಹೋಟೆಲ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಡ್ಲಿಗಿ ತಾಲ್ಲೂಕಿನ ಬಡೇಲಡುಕು ಗ್ರಾಮದ ನಿವಾಸಿ ಬಸವರಾಜ (26) ಅವರ ಶವ ನಗರದ ಸ್ಟೇಷನ್ ರಸ್ತೆಯ ರಾಯ ಕಾಲುವೆಯಲ್ಲಿ ಭಾನುವಾರ ಪತ್ತೆಯಾಗಿದೆ.
‘ಪಾನಮತ್ತರಾಗಿ ಕಾಲುವೆಯಲ್ಲಿ ಬಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ. ತನಿಖೆ ನಂತರ ವಾಸ್ತವ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.