ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಕೂಡ್ಲಿಗಿ: ಗಂಡನ ಕಿರುಕುಳಕ್ಕೆ ಬೇಸತ್ತು ನೀಲಮ್ಮ (34) ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ನೀಲಮ್ಮನನ್ನು ಸಂಡೂರು ತಾಲ್ಲೂಕಿನ ಮಲ್ಲಾಪುರ ಗ್ರಾಮದ ಬಿ.ದುರುಗೇಶ ಎನ್ನುವವರಿಗೆ ಮದುವೆ ಮಾಡಿಕೊಡಲಾಗಿತ್ತು.
ಸಂಡೂರಿನ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ದುರುಗೇಶ ಇತ್ತೀಚಿಗೆ ಕುಡಿತದ ಚಟಕ್ಕೆ ಬಿದ್ದು, ಬುದ್ದಿ ಹೇಳಿದರೂ ಕೇಳದೆ ಕುಡಿತಕ್ಕೆ ಹಣ ನೀಡುವಂತೆ ಪೀಡಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದನು. ಅದೇ ರೀತಿ ಶುಕ್ರವಾರ ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದೇ ಇದ್ದರೆ ಎಲ್ಲಿಯಾದರೂ ಹೋಗಿ ಸಾಯಿ ಎಂದು ಪ್ರಚೋದನೆ ನೀಡಿದ್ದರಿಂದ ಶುಕ್ರವಾರ ಪಟ್ಟಣದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.