ಬಳ್ಳಾರಿ: ‘ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಾನು ವಹಿಸಿಕೊಳ್ಳಲು ಸಿದ್ಧ. ನಾನು ಪಕ್ಷದ ಶಿಸ್ತಿನ ಸಿಪಾಯಿ’ ಎಂದು ಬಳ್ಳಾರಿ–ವಿಜಯನಗರ ಸಂಸದ ಇ.ತುಕಾರಾಂ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿರುವ ವಿಷಯದ ಕುರಿತು ಸೋಮವಾರ ಸುದ್ದಿಗಾರರಿಗೆ ಉತ್ತರಿಸಿದ ಅವರು, ‘ಕಾಂಗ್ರೆಸ್ ಮೊದಲಿನಿಂದಲೂ ಹೈಕಮಾಂಡ್ ಅಣತಿಯಂತೆ ನಡೆಯುತ್ತದೆ. ಯಾರಿಗೆ ಯಾವ ಜವಾಬ್ದಾರಿ ಕೊಡಬೇಕು ಎಂಬುದು ಸೇರಿ ಇತರೆ ವಿಷಯಗಳನ್ನು ಪಕ್ಷದ ಹಿರಿಯರು ಚರ್ಚಿಸಿ, ನಿರ್ಧರಿಸುತ್ತಾರೆ’ ಎಂದರು.
‘ಶಾಸಕನಾಗಿದ್ದ ನನಗೆ ಲೋಕಸಭೆಗೆ ಸ್ಪರ್ಧಿಸಲು ಸೂಚಿಸಲಾಯಿತು. ಶಾಸಕನಾಗಿದ್ದುಕೊಂಡೇ ಸಂಸದನಾದೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಹೊರುವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.