ADVERTISEMENT

ಅಕ್ರಮ ಮದ್ಯ ಮಾರಾಟ: ಒಬ್ಬನ ಬಂಧನ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 7:23 IST
Last Updated 17 ಡಿಸೆಂಬರ್ 2020, 7:23 IST

ಹೊಸಪೇಟೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಅನಂತಶಯನಗುಡಿ ನಿವಾಸಿ ಹುಲುಗಪ್ಪ ಹನುಮಂತಪ್ಪ (22) ಎಂಬಾತನನ್ನು ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

‘ಮದ್ಯ ಮಾರಾಟದ ಕುರಿತು ಡಿ. 13ರಂದು ದೂರು ಬಂದಿತ್ತು. ಈ ಕುರಿತು ತನಿಖೆ ನಡೆಸಿ, ಹುಲುಗಪ್ಪನನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ. ಆತನಿಂದ ₹1,765 ಮೊತ್ತದ 50 ವಿಸ್ಕಿ ಟೆಟ್ರಾ ಪ್ಯಾಕೆಟ್‌ ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT