ADVERTISEMENT

ಆಂಧ್ರಪ್ರದೇಶಕ್ಕೆ ಅಕ್ರಮ ಅದಿರು ಸಾಗಾಣೆ: 20 ಲಾರಿ ವಶ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 12:35 IST
Last Updated 20 ಜೂನ್ 2021, 12:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಳ್ಳಾರಿ: ಜಿಲ್ಲೆಯಿಂದ ಆಂಧ್ರ ಪ್ರದೇಶಕ್ಕೆ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಣಿಕೆ ಮಾಡುತ್ತಿದ್ದ 20 ಲಾರಿಗಳನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಅದಿರು ರಫ್ತು ಮಾಡುವುದನ್ನು 2010ರಲ್ಲೇ ನಿಷೇಧಿಸಲಾಗಿದೆ. ಹೀಗಿದ್ದರೂ ಅದನ್ನು ಉಲ್ಲಂಘಿಸಿ 20 ಲಾರಿಗಳಲ್ಲಿ ‘ರಾಕ್ ಡಸ್ಟ್’ ಸಾಗಿಸಲಾಗುತ್ತಿತ್ತು.
‘ಉತ್ಕೃಷ್ಟ ಗುಣಮಟ್ಟದ ಕಬ್ಬಿಣದ ಅದಿರು ತುಂಬಿದ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಇಸ್ಪಾತ್ ಕಂಪನಿ ಹೆಸರಿನಲ್ಲಿ 20 ಲಾರಿಗಳಲ್ಲಿ ಅದಿರು ತುಂಬಿ ಆಂಧ್ರ ಪ್ರದೇಶದ ಕೃಷ್ಣಪಟ್ಟಣಂ ಬಂದರಿಗೆ ಸಾಗಿಸಲಾಗುತ್ತಿತ್ತು. 20 ಲಾರಿ ಮತ್ತು ಚಾಲಕರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.