ADVERTISEMENT

ತುಂಗಭದ್ರಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ: ಆರು ಮಂದಿ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 6:17 IST
Last Updated 22 ಡಿಸೆಂಬರ್ 2025, 6:17 IST
ಹೂವಿನಹಡಗಲಿ ತಾಲ್ಲೂಕಿನ ತುಂಗಭದ್ರಾ ನದಿ ತೀರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಅಧಿಕಾರಿಗಳು ವಶಪಡಿಸಿಕೊಂಡರು
ಹೂವಿನಹಡಗಲಿ ತಾಲ್ಲೂಕಿನ ತುಂಗಭದ್ರಾ ನದಿ ತೀರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಅಧಿಕಾರಿಗಳು ವಶಪಡಿಸಿಕೊಂಡರು   

ಹೂವಿನಹಡಗಲಿ: ತಾಲ್ಲೂಕಿನ ಹರವಿ, ಲಿಂಗನಾಯಕನಹಳ್ಳಿ, ಕುರುವತ್ತಿ ಬಳಿಯ ತುಂಗಭದ್ರಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ಶನಿವಾರ ದಾಳಿ ನಡೆಸಿದ ಅಧಿಕಾರಿಗಳು, 116 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರು ಜನರ ವಿರುದ್ಧ ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನದಿಯಲ್ಲಿನ ಮರಳನ್ನು ಕಬ್ಬಿಣದ ತೆಪ್ಪಗಳಲ್ಲಿ ತುಂಬಿ ದಡಕ್ಕೆ ಸಾಗಿಸಿ, ಅಲ್ಲಿಂದ ಲಾರಿ, ಟ್ರ್ಯಾಕ್ಟರ್ ಗಳ ಮೂಲಕ ಬೇರೆಡೆಗೆ ಕಳುಹಿಸಲಾಗುತಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಹಿರೇಹಡಗಲಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದರು. ವಶಪಡಿಸಿಕೊಂಡ ಮರಳನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೀರ್ತಿ ಕುಮಾರ್‌, ಕಿರಣ್, ಪಿ. ಮಲ್ಲಯ್ಯ, ಪಿಎಸ್‌ಐ ಭರತರೆಡ್ಡಿ, ಪೊಲೀಸ್‌ ಸಿಬ್ಬಂದಿ ಶ್ರೀಶೈಲ ಇತರರು ದಾಳಿಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.